Webdunia - Bharat's app for daily news and videos

Install App

ಶಾಲೆ ಮೇಲೆ ರಷ್ಯಾ ಡ್ರೋನ್ ದಾಳಿಯಿಂದ 3 ಸಾವು

Webdunia
ಬುಧವಾರ, 22 ಮಾರ್ಚ್ 2023 (14:43 IST)
ಕೀವ್ : ಒಂದು ವರ್ಷ ಕಳೆದರೂ ಉಕ್ರೇನ್ ಮೇಲಿನ ರಷ್ಯಾ ದಾಳಿ ಇನ್ನೂ ನಿಂತಿಲ್ಲ. ಕೀವ್ನ ಶಾಲೆಯೊಂದಕ್ಕೆ ರಷ್ಯಾದ ಡ್ರೋನ್ ಅಪ್ಪಳಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದಾರೆ.

ಕೀವ್ ಮೇಲೆ ರಷ್ಯಾ ಮಂಗಳವಾರ ರಾತ್ರಿಯಿಡೀ ದಾಳಿ ನಡೆಸಿದೆ. ಈ ವೇಳೆ ಶಾಲೆಗೆ ಡ್ರೋನ್ ಅಪ್ಪಳಿಸಿತು. ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನೂ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ರಾಜ್ಯ ತುರ್ತು ಸೇವಾ ಘಟಕ ತಿಳಿಸಿದೆ. 

ಡ್ರೋನ್ ದಾಳಿಯಲ್ಲಿ ವಿದ್ಯಾರ್ಥಿಗಳಿದ್ದ ಎರಡು ಅಂತಸ್ತಿನ ಕಟ್ಟಡ ಹಾಗೂ ಅಧ್ಯಯನದ ಕಟ್ಟಡವೂ ಸಹ ನೆಲಸಮಗೊಂಡಿದೆ. ಡ್ರೋನ್ ಅಪ್ಪಳಿಸಿದಾಗ ಶಾಲೆಯ 300 ಚದರ ಮೀಟರ್ವರೆಗೂ ಬೆಂಕಿ ಆವರಿಸಿತು. ಸ್ಥಳೀಯರು ಬೆಂಕಿ ನಂದಿಸುವ ಕಾರ್ಯ ಮಾಡಿದರು.

ರಷ್ಯಾ ನಿಯಮಿತವಾಗಿ ಉಕ್ರೇನ್ ವಿರುದ್ಧ ಕ್ಷಿಪಣಿ, ಫಿರಂಗಿಗಳು ಮತ್ತು ಡ್ರೋನ್ಗಳಿಂದ ದಾಳಿ ಮಾಡುತ್ತಿದೆ. ಇದರಿಂದ ಜನತೆ ವಿದ್ಯುತ್ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಪರದಾಡುವಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments