Webdunia - Bharat's app for daily news and videos

Install App

ಪಾಕಿಸ್ತಾನದಲ್ಲಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

Webdunia
ಭಾನುವಾರ, 27 ಜುಲೈ 2014 (10:49 IST)
ಪಾಕಿಸ್ತಾನದ ಲಾಹೋರ್ ನಗರದಲ್ಲಿ  3 ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ. ಪೋಲಿಸರ ಪ್ರಕಾರ ಮಗು ತನ್ನ ಸಹೋದರ, ಸಹೋದರಿಯರ ಜತೆ ಜನನಿಬಿಡ ಪ್ರದೇಶ  ಗ್ರೀನ್ ಟೌನ್‌ನ  ಹಸಿರು ಪಟ್ಟಿಯಲ್ಲಿರುವ ಮನೆಯಲ್ಲಿ ನಿದ್ರಿಸುತ್ತಿದ್ದಳು.  

ನಿನ್ನೆಯ ಸಂಜೆ ಸಮಯದಲ್ಲಿ ಆಕೆಯ ತಂದೆ ತಾಯಿ ಸಾಮಾನುಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋಗಿದ್ದರು. ಮನೆಗೆ ಹಿಂತಿರುಗಿದಾಗ ಮಲಗಿದ್ದ ಮಗು ನಾಪತ್ತೆಯಾಗಿರುವುದನ್ನು ಕಂಡು ಅವರು ಗಾಬರಿಗೊಳಗಾದರು. ತಕ್ಷಣ ಪೋಲಿಸ್  ಠಾಣೆಗೆ ಧಾವಿಸಿದ ಅವರು ಪ್ರಕರಣ ದಾಖಲಿಸಿದರು. 
 
ಸ್ವಲ್ಪ ಹೊತ್ತಿನ ನಂತರ ಅವರ ಮನೆಯಿಂದ ಸ್ವಲ್ಪ ದೂರದಲ್ಲಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವೆಂದು ಹೇಳಲಾಗುತ್ತಿದೆ. 
 
ಈ ಕುರಿತು ಪ್ರತಿಕ್ರಿಯಿಸಿರುವ ಸಹಾಯಕ ಪೋಲಿಸ್ ಅಧೀಕ್ಷಕ ಮೊಹಮ್ಮದ್ ಇಕ್ಬಾಲ್ ಮಗುವಿನ ಪರಿವಾರದವರ ಸಹಾಯದಿಂದ ಸಂದೇಹಾಸ್ಪದ ಆರೋಪಿಯ ಭಾವಚಿತ್ರವನ್ನು ರಚಿಸಲಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments