Select Your Language

Notifications

webdunia
webdunia
webdunia
Friday, 4 April 2025
webdunia

ಭೀಕರ ಅಗ್ನಿ ದುರಂತದಲ್ಲಿ 63 ಮಂದಿ ದುರ್ಮರಣ!

ಜೋಹಾನ್ಸ್‌ಬರ್ಗ್‌
ಕೇಪ್‌ಟೌನ್ , ಗುರುವಾರ, 31 ಆಗಸ್ಟ್ 2023 (13:25 IST)
ಕೇಪ್ಟೌನ್: ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನ 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಮಧ್ಯ ಜೋಹಾನ್ಸ್ಬರ್ಗ್ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಗ್ನಿಶಾಮಕ ದಳ ಹಾಗೂ ತುರ್ತು ವಾಹನಗಳು ಕಾರ್ಯಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ : ಕೇಂದ್ರ ಸರ್ಕಾರ