Select Your Language

Notifications

webdunia
webdunia
webdunia
webdunia

ಅಮೆರಿಕ ಡ್ರೋನ್ಗೆ ರಷ್ಯಾದ ಯುದ್ಧ ವಿಮಾನ ಡಿಕ್ಕಿ

ಅಮೆರಿಕ ಡ್ರೋನ್ಗೆ ರಷ್ಯಾದ ಯುದ್ಧ ವಿಮಾನ ಡಿಕ್ಕಿ
ಮಾಸ್ಕೋ , ಗುರುವಾರ, 16 ಮಾರ್ಚ್ 2023 (09:04 IST)
ಮಾಸ್ಕೋ : ಉಕ್ರೇನ್ ವಿರುದ್ಧ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಅಮೆರಿಕ ಮತ್ತು ರಷ್ಯಾ ಮುಖಾಮುಖಿಯಾಗಿದೆ. ರಷ್ಯಾದ Su-27 ಜೆಟ್ ಫೈಟರ್ ಕಪ್ಪು ಸಮುದ್ರದ ಮೇಲೆ ಅಮೆರಿಕದ ಒಕಿ-9 ರೀಪರ್ ಡ್ರೋನ್ಗೆ ಡಿಕ್ಕಿ ಹೊಡೆದಿದೆ ಎಂದು ಯುಎಸ್ ಮಿಲಿಟರಿಯ ಯುರೋಪಿಯನ್ ಕಮಾಂಡ್ ತಿಳಿಸಿದೆ.

ನಮ್ಮ ಒಕಿ-9 ಡ್ರೋನ್ ಅಂತಾರಾಷ್ಟ್ರೀಯ ವಾಯುಪ್ರದೇಶದಲ್ಲಿ ಎಂದಿನಂತೆ ಕಾರ್ಯಾಚರಣೆ ನಡೆಸುತ್ತಿತ್ತು. ಅದನ್ನು ರಷ್ಯಾದ ಜೆಟ್ ತಡೆಹಿಡಿದು ಹೊಡೆದುರುಳಿಸಿದೆ. ಇದರ ಪರಿಣಾಮವಾಗಿ ಡ್ರೋನ್ ಪತನಗೊಂಡಿದೆ ಎಂದು ಅಮೆರಿಕ ಹೇಳಿದೆ.

ಬ್ರಸೆಲ್ಸ್ನಲ್ಲಿರುವ ನ್ಯಾಟೋ ರಾಜತಾಂತ್ರಿಕರು ಘಟನೆಯನ್ನು ದೃಢಪಡಿಸಿದ್ದಾರೆ. ಕಣ್ಗಾವಲು ಮಾಡಲು ಅಮೆರಿಕ ಒಕಿ-9 ಬಳಸುತ್ತಿದೆ. ರಷ್ಯಾದ ನೌಕಾ ಪಡೆಗಳ ಮೇಲೆ ಕಣ್ಣಿಟ್ಟು ಕಪ್ಪು ಸಮುದ್ರದ ಮೇಲೆ ದೀರ್ಘಕಾಲ ಕಾರ್ಯನಿರ್ವಹಿಸುತ್ತಿತ್ತು. 

ಅಮೆರಿಕದ ಆರೋಪವನ್ನು ರಷ್ಯಾ ತಿರಸ್ಕರಿಸಿದೆ. ಒಕಿ-9 ಡ್ರೋನ್ ರಷ್ಯಾದ ಗಡಿಯ ಬಳಿ ಹಾರಾಟ ನಡೆಸುತ್ತಿತ್ತು. ಈ ಹಿನ್ನೆಲೆಯಲ್ಲಿ ನಾವು ಎಚ್ಚರಿಕೆ ನೀಡಿದೆವು. ಈ ವೇಳೆ ಡ್ರೋನ್ ಎತ್ತರದಲ್ಲಿ ಸಂಚರಿಸುತ್ತಿದ್ದ ಕಾರಣ ನಿಯಂತ್ರಣ ಮಾಡಲು ಸಾಧ್ಯವಾಗದೇ ಪತನಗೊಂಡು ನೀರಿನ ಮೇಲೆ ಬಿದ್ದಿದೆ ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ನೇಮಕಾತಿ ಸ್ಥಗಿತಗೊಳಿಸಿದ ಆ್ಯಪಲ್