ಕಾಬೂಲ್ : ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ ಸರ್ಕಾರ ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾಲಯ ಶಿಕ್ಷಣವನ್ನು ನಿಷೇಧಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳು ತಮ್ಮ ತರಗತಿಗೆ ಗೈರಾಗಿದ್ದಾರೆ.
ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗುವವರೆಗೂ ತಾವೂ ಕಾಲೇಜು ಪ್ರವೇಶ ಮಾಡುವುದಿಲ್ಲವೆಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಮಹಿಳಾ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದಿದ್ರೆ, ನಾವೂ ನಮ್ಮ ಪಾಠ ಪ್ರವಚನಗಳನ್ನ ಬಹಿಷ್ಕರಿಸುತ್ತೇವೆ. ಶಿಕ್ಷಣವನ್ನು ಮುಂದುವರಿಸೋದಿಲ್ಲ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.