ಆಕ್ಷೇಪಾರ್ಹ ಬರಹ ಟ್ವೀಟ್ ಮಾಡಿದಕ್ಕೆ ಮಹಿಳೆಗೆ ಬಿತ್ತು ಭಾರೀ ದಂಡ!

Webdunia
ಮಂಗಳವಾರ, 8 ಆಗಸ್ಟ್ 2023 (10:36 IST)
ಮಾಸ್ಕೋ : `ಸೆಕ್ಸ್ ತಂಪಾಗಿದೆ, ಆದ್ರೆ ಪುಟಿನ್ ಹತ್ಯೆ ಇನ್ನೂ ಉತ್ತಮವಾಗಿದೆ’ ಎನ್ನುವ ಬರಹ ಹೊಂದಿದ ಫೋಟೋ ಟ್ವೀಟ್ ಮಾಡಿದ್ದಕ್ಕೆ ಮಹಿಳೆಯೊಬ್ಬಳಿಗೆ ಭಾರೀ ದಂಡ ವಿಧಿಸಿರುವ ಘಟನೆ ರಷ್ಯಾದಲ್ಲಿ ನಡೆದಿದೆ.

`ಸೆಕ್ಸ್ ಇಸ್ ಕೂಲ್, ಬಟ್ ಪುಟಿನ್ಸ್ ಡೆತ್ ಇಸ್ ಬೆಟರ್’ ಆಕ್ಷೇಪಾರ್ಹ ಬರಹ ಹೊಂದಿದ್ದ ಕ್ಯಾರಿ ಬ್ಯಾಗ್ ಫೋಟೋವನ್ನ ಟ್ವೀಟ್ನಲ್ಲಿ ಹಂಚಿಕೊಂಡಿದ್ದಕ್ಕಾಗಿ ಅಲೆಕ್ಸಾಂಡ್ರಾ ಎಂಬ ರಷ್ಯಾದ ಮಹಿಳೆಗೆ 30 ಸಾವಿರ ರುಬೆಲ್ಸ್ (ಅಂದಾಜು 25 ಸಾವಿರ ರೂ.) ದಂಡ ವಿಧಿಸಲಾಗಿದೆ.

ಆಕೆ ತನ್ನ ಇನ್ಸ್ಟಾಗ್ರಾಮ್ ಖಾತೆಯ ಬಹುತೇಕ ಪೋಸ್ಟ್ಗಳು ಸ್ಕ್ರೀನ್ಶಾಟ್ ಆಧರಿಸಿದ ಪೋಸ್ಟ್ಗಳಾಗಿವೆ ಎಂದು ಹೇಳಿಕೊಂಡಿದ್ದಾಳೆ. ಕಳೆದ ಜೂನ್ 28ರಂದು ಅಲೆಕ್ಸಾಂಡ್ರಾಳನ್ನ ಆಂತರಿಕ ವ್ಯವಹಾರಗಳ ಸಚಿವಾಲಯದ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಆಕೆಯ ಇನ್ಸ್ಟಾಗ್ರಾಮ್ ಖಾತೆಯನ್ನ ಪರಿಶೀಲಿಸಿದಾಗ ಪುಟಿನ್ ವಿರುದ್ಧ ಹಾಕಲಾದ ಈ ಪೋಸ್ಟ್ನೊಂದಿಗೆ `ಯುದ್ಧ ಬೇಡ’ ಎಂಬ ಸಂದೇಶ ಹೊಂದಿರುವ ಬರಹಗಳೂ ಇದ್ದವು.

ವಿಚಾರಣೆ ಸಂದರ್ಭದಲ್ಲಿ ಆಕೆಯ ಕೈ ತೋಳುಗಳ ಮೇಲೆ ಹಾಕಿಸಿಕೊಂಡಿದ್ದ ಅಚ್ಚೆ ಗುರುತುಗಳನ್ನು ಪರಿಶೀಲಿಸುವ ಜೊತೆಗೆ ಅಧಿಕಾರಿಗಳು ಅದರ ಫೋಟೋಗಳನ್ನೂ ತೆಗೆದುಕೊಂಡಿದ್ದರು. ಆಕೆಯನ್ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಒಳಪಡಿಸಿದಾಗ ಲೈಂಗಿಕ ಸಂಬಂಧಗಳ ಪ್ರಚಾರ ಹಾಗೂ ಮಾನಹಾನಿ ಆರೋಪದ ಮೇಲೆ ಅಲ್ಲಿಯೂ ಆಕೆಗೆ 2 ಸಾವಿರ ಡಾಲರ್ (1.65 ಲಕ್ಷ ರೂ.) ದಂಡ ವಿಧಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮುಂದಿನ ಸುದ್ದಿ