Select Your Language

Notifications

webdunia
webdunia
webdunia
webdunia

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Pak air strike

Krishnaveni K

ಕಾಬೂಲ್ , ಶನಿವಾರ, 18 ಅಕ್ಟೋಬರ್ 2025 (09:24 IST)
Photo Credit: X
ಕಾಬೂಲ್: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಕ್ರಿಕೆಟಿಗರು ಸಾವನ್ನಪ್ಪಿದ್ದು ಕ್ರಿಕೆಟಿಗ ರಶೀದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ ಡುರಾಂಡ್ ಲೈನ್ ಬಾರ್ಡರ್ ನಲ್ಲಿ 12 ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿದ್ದರು.

ಇದೀಗ ಮತ್ತೊಮ್ಮೆ ಪಾಕಿಸ್ತಾನ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ. ಇವರನ್ನು ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ.

ಇದು ಅಫ್ಘಾನಿಸ್ತಾನದಲ್ಲಿ ಭಾರೀ ಆಕ್ರೋಶವುಂಟು ಮಾಡಿದೆ. ಈ ಬಗ್ಗೆ ಕ್ರಿಕೆಟಿಗ ರಶೀದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದೇಶವನ್ನು ಪ್ರತಿನಿಧಿಸುವ ಯುವ ಕ್ರಿಕೆಟಿಗರು, ಮಹಿಳೆಯರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದು ಅತ್ಯಂತ ಬೇಸರದ ಸಂಗತಿ. ಪಾಕಿಸ್ತಾನ ದಾಳಿಯಲ್ಲಿ ಅಮಾಯಕರು ಸಾವನ್ನಪ್ಪಿದ್ದು ಅತ್ಯಂತ ಹೇಯ ಕೃತ್ಯ’ ಎಂದು ರಶೀದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ