Webdunia - Bharat's app for daily news and videos

Install App

ವಿದೇಶಕ್ಕೆ ಆ.31ರವರೆಗೂ ವಿಮಾನಯಾನ ನಿಷೇಧ

Webdunia
ಶನಿವಾರ, 31 ಜುಲೈ 2021 (17:27 IST)
ನವದೆಹಲಿ (ಜು.31): ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.

•ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ನಿರ್ಬಂಧ
• ವಿಮಾನ ರದ ಮೇಲೆ ನಿರ್ಬಂಧ ಆಗಸ್ಟ್ 31ರವರೆಗೆ ವಿಸ್ತರಣೆ
•ಕೊರೋನಾ ಪ್ರಕರಣಗಳ ಏರಿಳಿತ ಗಮನದಲ್ಲಿರಿಸಿಕೊಂಡು ಕೆಲವೊಂದು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಅವಕಾಶ
ವಿಮಾನಯಾನ ಸೇವೆ ನಿಷೇಧಿಸಿದ್ದಾಗಿ ಕೇಂದ್ರ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಆದರೆ ಕೊರೋನಾ ಪ್ರಕರಣಗಳ ಏರಿಳಿತ ಗಮನದಲ್ಲಿರಿಸಿಕೊಂಡು ಕೆಲವೊಂದು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.
ಕೋವಿಡ್ ಹಿನ್ನಲೆಯಲ್ಲಿ 2020ರ ಮಾರ್ಚ್ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿತ್ತು. ದ್ವಿಪಕ್ಷೀಯ ಒಪ್ಪಂದದೊಂದಿಗೆ ಕೆಲವು ದೇಶಗಳಿಗೆ ಭಾರತದ ವಿಮಾನಗಳು ‘ಏರ್ ಬಬಲ್’ ವ್ಯವಸ್ಥೆಯೊಡನೆ ಜುಲೈ 2020ರಿಂದ ವಿಮಾನಯಾನ ಸೌಲಭ್ಯ ಒದಗಿಸುತ್ತಿವೆ.
ದೇಶದಲ್ಲಿಯೂ ಈಗ ದಿನದಿನವೂ ಕೊರೋನಾ ಸೋಂಕಿನ ಸಂಖ್ಯೆ ಏರುತ್ತಲೇ ಇದೆ. ಸದ್ಯ ದೇಶದಲ್ಲಿ 4 ಲಕ್ಷ ಸಕ್ರೀಯ ಕೇಸುಗಳಿದ್ದು 40 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ಕೇರಳದಲ್ಲಿ ಅತ್ಯಂತ ಹೆಚ್ಚಿನ ಸೋಂಕು ಪತ್ತೆಯಾಗಿದೆ. ಈಗ ದೇಶದ ಲಸಿಕೆ ಹಂಚಿಕೆ ಪ್ರಕ್ರಿಯೆ ತೀವ್ರಗೊಳಿಸುತ್ತಿದ್ದು, 3ನೇ ಅಲೆಯ ಆತಂಕದಲ್ಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments