Select Your Language

Notifications

webdunia
webdunia
webdunia
webdunia

ದ್ವಿಚಕ್ರ ವಾಹನಕ್ಕೆ ಅಳವಡಿಸಿದ್ದ IED ಸ್ಫೋಟ !

ದ್ವಿಚಕ್ರ ವಾಹನಕ್ಕೆ ಅಳವಡಿಸಿದ್ದ IED ಸ್ಫೋಟ !
ಇಸ್ಲಾಮಾಬಾದ್ , ಭಾನುವಾರ, 26 ಫೆಬ್ರವರಿ 2023 (17:07 IST)
ಇಸ್ಲಾಮಾಬಾದ್ : ಪಾಕಿಸ್ತಾನ ಬಲೂಚಿಸ್ತಾನದ ಮಾರುಕಟ್ಟೆಯೊಂದರಲ್ಲಿ ಭಾನುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ.
 
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿಗಳ ಪ್ರಕಾರ ರಖ್ನಿ ಮಾರುಕಟ್ಟೆ ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡಿದೆ.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡ 10 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬರ್ಖಾನ್ ಸ್ಟೇಷನ್ ಹೌಸ್ ಆಫೀಸರ್ ಸಜ್ಜದ್ ಅಫ್ಜಲ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡಿವೆ. ಜನರು ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಸೇರಿದ್ದು, ರಕ್ತಸಿಕ್ತ ಗಾಯಾಳುಗಳನ್ನು ಅಲ್ಲಿಂದ ಹೊತ್ತುಕೊಂಡು ಹೋಗುವ ದೃಶ್ಯಗಳು ವೀಡಿಯೋದಲ್ಲಿ ಕಾಣಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಚ್ 3ರಂದು ಅಮಿತ್ ಶಾ ಬಸವಕಲ್ಯಾಣ ಪ್ರವಾಸ