Select Your Language

Notifications

webdunia
webdunia
webdunia
webdunia

ಜನರಲ್ಲಿ ಆತಂಕ : ಅಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ !

ಜನರಲ್ಲಿ ಆತಂಕ : ಅಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ !
ಕಾಬೂಲ್ , ಭಾನುವಾರ, 6 ಆಗಸ್ಟ್ 2023 (07:51 IST)
ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ.  ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಶನಿವಾರ ರಾತ್ರಿ ಭೂಮಿ ಕಂಪಿಸಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.
 
ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಮಾಹಿತಿ ಪ್ರಕಾರ, ಭೂಕಂಪನದ ಕೇಂದ್ರಬಿಂದು ಅಕ್ಷಾಂಶ 36.38 ಮತ್ತು ರೇಖಾಂಶ 70.77 ನಲ್ಲಿ 181 ಕಿ.ಮೀ ಆಳದಲ್ಲಿ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಪತ್ತೆಯಾಗಿದೆ.

ಶನಿವಾರ ರಾತ್ರಿ 9:31ರ ಸುಮಾರಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ಭೂಕಂಪದ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಅಫ್ಘಾನಿಸ್ತಾನ ಮಾತ್ರವಲ್ಲದೇ ಪಾಕಿಸ್ತಾನದಲ್ಲೂ ಭೂಕಂಪನವಾಗಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಾರಾ ಸಗಟಾಗಿ ಧರೋಡೆ..‌ಭ್ರಷ್ಟಾಚಾರ : ಅಶ್ವಥ್ ನಾರಾಯಣ