Publish Date: Sun, 05 Mar 2023 (13:54 IST)
Updated Date: Sun, 05 Mar 2023 (13:58 IST)
ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಮೇಲಿನ ದಾಳಿ ಮುಂದುವರೆದಿದೆ. ಬ್ರಿಸ್ಬೇನ್ ನಗರದಲ್ಲಿ ಶ್ರೀಲಕ್ಷ್ಮೀ ನಾರಾಯಣ ದೇಗುಲದ ಮೇಲೆ ದಾಳಿ ನಡೆದಿದೆ, ದೇಗುಲದ ಮೇಲೆ ದಾಳಿ ನಡೆಸಿದ ಖಲಿಸ್ತಾನ್ ಸಂಘಟನೆ ಬೆಂಬಲಿಗರು, ದೇಗುಲವನ್ನು ಧ್ವಂಸಗೊಳಿಸಿದ್ದಾರೆ. ಎರಡು ತಿಂಗಳಲ್ಲಿ ಆಸ್ಟ್ರೇಲಿಯದ ದೇವಸ್ಥಾನದಲ್ಲಿ ನಡೆದ ನಾಲ್ಕನೇ ಘಟನೆ ಇದಾಗಿದೆ. ಬೆಳಗ್ಗೆ ಭಕ್ತರು ಪೂಜೆ ಸಲ್ಲಿಸಲು ಆಗಮಿಸಿದಾಗ ವಿಧ್ವಂಸಕ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ.. ಈ ಕುರಿತು ಅರ್ಚಕರು ಸ್ಥಳೀಯ ಪೊಲೀಸರಿಗೆ ತಿಳಿಸಿದ್ದಾರೆ.. ಪೊಲೀಸರು ಪರಿಶೀಲನೆ ನಡೆಸಿ ಕುಕೃತ್ಯ ಎಸಗಿದವರಿಗೆ ಬಲೆ ಬೀಸಿದ್ದಾರೆ