ಬಾಂಗ್ಲಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತದತ್ತ ಬಂದ್ರ ಶೇಖ್ ಹಸೀನಾ

Sampriya
ಸೋಮವಾರ, 5 ಆಗಸ್ಟ್ 2024 (18:17 IST)
ಢಾಕಾ: ಬಾಂಗ್ಲಾದೇಶದಲ್ಲಿ ಉಲ್ಭಣಿಸಿರುವ ಹಿಂಸಾಚಾರದ ಬೆನ್ನಲ್ಲೇ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂಬ ಮಾಹಿತಿಯಿದೆ.

ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಅಸಹಕಾರ ಚಳವಳಿಯ ಮೊದಲ ದಿನವಾದ ಭಾನುವಾರ, ಪ್ರತಿಭಟನಕಾರರು ಹಾಗೂ ಆಡಳಿತಾರೂಢ ಅವಾಮಿ ಲೀಗ್‌ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆಯಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಹಿಂಸಾಚಾರ ತೀವ್ರ ಸ್ವರೂಪ ಪಡೆಯುತ್ತಿದ್ದ ಹಾಗೇ ಪ್ರಧಾನಿ ಶೇಖ್ ಅವರು ರಾಜೀನಾಮೆ ಸಲ್ಲಿಸಿ, ಇದೀಗ  ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದಾರೆ.

ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ. ಸೇನಾ ಮುಖ್ಯಸ್ಥರು ಶೀಘ್ರದಲ್ಲೇ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.

ಅನಿರ್ದಿಷ್ಟ ಅವಧಿಗೆ ದೇಶದಾದ್ಯಂತ ಕರ್ಫ್ಯೂ ವಿಧಿಸಲು ಗೃಹ ಸಚಿವಾಲಯ ತೀರ್ಮಾನಿಸಿತ್ತು. ಫೇಸ್‌ಬುಕ್‌, ಮೆಸೆಂಜರ್, ವಾಟ್ಸ್‌ಆ್ಯಪ್‌ ಮತ್ತು ಇನ್‌ಸ್ಟಾಗ್ರಾಂ ಸೇವೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿತ್ತು. 4ಜಿ ಮೊಬೈಲ್‌ ಇಂಟರ್ನೆಟ್ ಸೇವೆಗಳ ಸ್ಥಗಿತಕ್ಕೂ ಆದೇಶಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಮುಂದಿನ ಸುದ್ದಿ
Show comments