Webdunia - Bharat's app for daily news and videos

Install App

ಭಾರತ-ಅಮೆರಿಕ ನಡುವಣ ಸ್ನೇಹ ಇನ್ನಷ್ಟು ಗಟ್ಟಿಯಾಗಲಿದೆ ಎಂದ ಬೈಡನ್

Webdunia
ಶನಿವಾರ, 25 ಸೆಪ್ಟಂಬರ್ 2021 (11:19 IST)
ವಾಷಿಂಗ್ಟನ್ : ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಶ್ವೇತಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಈ ವೇಳೆ ಇಬ್ಬರೂ ನಾಯಕರು ಭಾರತ-ಅಮೆರಿಕ ನಡುವಣ ಸ್ನೇಹ ಇನ್ನಷ್ಟು ಗಟ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Photo Courtesy: Google

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಶ್ವೇತಭವನಕ್ಕೆ ಭೇಟಿ ನೀಡಿದರು. ಈ ವೇಳೆ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಇತರೆ ಪ್ರಮುಖ ಅಧಿಕಾರಿಗಳನ್ನು ಭೇಟಿ ಮಾಡಿದರು. ಕೆಲ ಹೊತ್ತು ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಮತ್ತು ಜೋ ಬೈಡನ್ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, 'ಇಂದಿನ ದ್ವಿಪಕ್ಷೀಯ ಮಾತುಕತೆ ಬಹಳ ಮಹತ್ವದ್ದು. ಈ ಶತಮಾನದ ಮೂರನೇ ದಶಕದ ಆರಂಭದಲ್ಲಿ ನಾವು ಮಾತುಕತೆ ನಡೆಸುತ್ತಿದ್ದೇವೆ. ಈ ದಶಕವು ಹೇಗೆ ರೂಪುಗೊಳ್ಳುತ್ತದೆ ಎಂಬುದರಲ್ಲಿ ನಿಮ್ಮ (ಬೈಡನ್) ನಾಯಕತ್ವವು ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಭಾರತ ಮತ್ತು ಅಮೆರಿಕ ನಡುವಣ ಸ್ನೇಹವನ್ನು ಇನ್ನಷ್ಟು ಗಟ್ಟಿಗೊಳಿಸಲು ಈಗ ಬೀಜವನ್ನು ಬಿತ್ತಲಾಗಿದೆ ಎಂದು ಮೋದಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಂತೆಯೇ 'ತಂತ್ರಜ್ಞಾನವು ಪ್ರೇರಕ ಇಂದು ಶಕ್ತಿಯಾಗುತ್ತಿದೆ. ಜಾಗತಿಕ ಒಳಿತಿಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ನಾವು ನಮ್ಮ ಪ್ರತಿಭೆಯನ್ನು ಬಳಸಿಕೊಳ್ಳಬೇಕು. ಅಧ್ಯಕ್ಷ ಬೈಡನ್ ಪ್ರಸ್ತಾಪಿಸಿದ ಪ್ರತಿಯೊಂದು ವಿಷಯಗಳೂ ಭಾರತ-ಅಮೆರಿಕ ಸ್ನೇಹದ ವಿಚಾರದಲ್ಲಿ ನಿರ್ಣಾಯಕವಾಗಿವೆ. ಬೈಡನ್ ಅವರು ಮಹಾತ್ಮ ಗಾಂಧೀಜಿ ಅವರ ಜಯಂತಿ ಬಗ್ಗೆ ಪ್ರಸ್ತಾಪಿಸಿದರು. ಗಾಂಧೀಜಿ ಅವರು ನಂಬಿಕೆ-ವಿಶ್ವಾಸಗಳ ಬಗ್ಗೆ ಪ್ರತಿಪಾದಿಸಿದ್ದವರು. ಮುಂದಿನ ದಿನಗಳಲ್ಲಿ ಗಾಂಧಿ ತತ್ವವು ಪ್ರಪಂಚಕ್ಕೆ ಬಹಳ ಮಹತ್ವದ್ದಾಗಲಿದೆ ಎಂದು ಬೈಡನ್ ಹೇಳಿರುವುದಾಗಿ ಮೋದಿ ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ್ದ ಜೋ ಬೈಡನ್, 'ಇಂದು ನಾನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಶ್ವೇತ ಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದೇನೆ. ಅಮೆರಿಕ-ಭಾರತ ನಡುವಣ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದನ್ನು ಎದುರು ನೋಡುತ್ತಿದ್ದೇನೆ. ಹವಾಮಾನ ಬದಲಾವಣೆಯಿಂದ ತೊಡಗಿ ಕೋವಿಡ್ ಬಿಕ್ಕಟ್ಟಿನ ವರೆಗೆ ಎಲ್ಲ ಸಮಸ್ಯೆಗಳನ್ನು ಎದುರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments