Select Your Language

Notifications

webdunia
webdunia
webdunia
webdunia

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

Iran-Israel conflict, attack on Iran's nuclear facilities, US air strike

Sampriya

ವಾಷಿಂಗ್ಟನ್‌ , ಭಾನುವಾರ, 22 ಜೂನ್ 2025 (10:25 IST)
ವಾಷಿಂಗ್ಟನ್‌: ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ಕೊನೆಗೂ ಅಮೆರಿಕಾ ಎಂಟ್ರಿಯಾಗಿದೆ. ಇರಾನ್‌ನಲ್ಲಿರುವ ಮೂರು ಅಣುಸ್ಥಾವರದ ಮೇಲೆ ಅಮೆರಿಕಾ ಏರ್‌ಸ್ಟ್ರೈಕ್‌ ದಾಳಿ ನಡೆಸಿವೆ. 

ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಸಾಮಾಜಿಕ ಮಾಧ್ಯಮ ಟ್ರತ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಅಮೆರಿಕ ನಡೆಸಿರುವ ಕಾರ್ಯಾಚರಣೆಯ ಸಂಬಂಧ ಶ್ವೇತಭವನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವುದಾಗಿ ಟ್ರಂಪ್‌ ತಿಳಿಸಿದ್ದಾರೆ. ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಅಮೆರಿಕ, ಇಸ್ರೇಲ್ ಮತ್ತು ಇಡೀ ಜಗತ್ತಿಗೆ ಇದು ಐತಿಹಾಸಿಕ ಕ್ಷಣವಾಗಿದೆ. ಯುದ್ಧವನ್ನು ನಿಲ್ಲಿಸಲು ಇರಾನ್ ಈಗ ಸಿದ್ಧವಾಗಲೇಬೇಕು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ. ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು  ಎಂದು ಹೇಳಿದ್ದಾರೆ. 

ಈ ನಡುವೆ ಇರಾನ್ ಜೊತೆಗಿನ ಯುದ್ಧಕ್ಕೆ ಅಮೆರಿಕಾ ಅಧಿಕೃತ ಎಂಟ್ರಿ ಕೊಟ್ಟಿರುವುದಕ್ಕೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಟ್ರಂಪ್ ಅವರ ದಿಟ್ಟ ನಿರ್ಧಾರಕ್ಕೆ ಅಭಿನಂದನೆಗಳು ಎಂದು ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ