ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

Sampriya
ಭಾನುವಾರ, 22 ಜೂನ್ 2025 (10:25 IST)
ವಾಷಿಂಗ್ಟನ್‌: ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ಕೊನೆಗೂ ಅಮೆರಿಕಾ ಎಂಟ್ರಿಯಾಗಿದೆ. ಇರಾನ್‌ನಲ್ಲಿರುವ ಮೂರು ಅಣುಸ್ಥಾವರದ ಮೇಲೆ ಅಮೆರಿಕಾ ಏರ್‌ಸ್ಟ್ರೈಕ್‌ ದಾಳಿ ನಡೆಸಿವೆ. 

ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಸಾಮಾಜಿಕ ಮಾಧ್ಯಮ ಟ್ರತ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಅಮೆರಿಕ ನಡೆಸಿರುವ ಕಾರ್ಯಾಚರಣೆಯ ಸಂಬಂಧ ಶ್ವೇತಭವನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವುದಾಗಿ ಟ್ರಂಪ್‌ ತಿಳಿಸಿದ್ದಾರೆ. ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಅಮೆರಿಕ, ಇಸ್ರೇಲ್ ಮತ್ತು ಇಡೀ ಜಗತ್ತಿಗೆ ಇದು ಐತಿಹಾಸಿಕ ಕ್ಷಣವಾಗಿದೆ. ಯುದ್ಧವನ್ನು ನಿಲ್ಲಿಸಲು ಇರಾನ್ ಈಗ ಸಿದ್ಧವಾಗಲೇಬೇಕು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ. ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು  ಎಂದು ಹೇಳಿದ್ದಾರೆ. 

ಈ ನಡುವೆ ಇರಾನ್ ಜೊತೆಗಿನ ಯುದ್ಧಕ್ಕೆ ಅಮೆರಿಕಾ ಅಧಿಕೃತ ಎಂಟ್ರಿ ಕೊಟ್ಟಿರುವುದಕ್ಕೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಟ್ರಂಪ್ ಅವರ ದಿಟ್ಟ ನಿರ್ಧಾರಕ್ಕೆ ಅಭಿನಂದನೆಗಳು ಎಂದು ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments