ಇಸ್ಲಾಮಾಬಾದ್ : ಮಸೀದಿಯೊಂದರಲ್ಲಿ ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ.
ಜುಹರ್ ಪ್ರಾರ್ಥನೆಯ ನಂತರ ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ವಾಯುವ್ಯ ನಗರದಲ್ಲಿ ಪೇಶಾವರದ ಪೊಲೀಸ್ ಹೆಡ್ ಕ್ವಾಟ್ರಸ್ ಬಳಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮಸೀದಿಯ ಒಂದು ಬದಿ ಕುಸಿದಿದೆ.
ವ್ಯಕ್ತಿಯೊಬ್ಬ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯೊಳಗೆ ಆತ್ಮಾಹುತಿ ದಾಳಿ ನಡೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆತ ಪ್ರಾರ್ಥನೆಯ ಸಮಯದಲ್ಲಿ ಮೊದಲ ಸಾಲಿನಲ್ಲಿ ಇದ್ದನು. ಅವನು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಭದ್ರತಾ ಇಲಾಖೆ ತಿಳಿಸಿದೆ.