Select Your Language

Notifications

webdunia
webdunia
webdunia
webdunia

ಪ್ರಾರ್ಥನೆ ಮಾಡ್ತಿದ್ದ ವೇಳೆ ಬಾಂಬ್ ಸ್ಫೋಟ!

ಪ್ರಾರ್ಥನೆ ಮಾಡ್ತಿದ್ದ ವೇಳೆ ಬಾಂಬ್ ಸ್ಫೋಟ!
ಕಾಬೂಲ್ , ಗುರುವಾರ, 18 ಆಗಸ್ಟ್ 2022 (16:14 IST)
ಕಾಬೂಲ್ : ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನ ಮಸೀದಿಯ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟದ ಬಗ್ಗೆ ಭದ್ರತಾ ಇಲಾಖೆ ಬಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ.

ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸಿರುವ ಸಾಧ್ಯತೆಗಳಿವೆ ಎಂಬುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ ಅಂತ್ಯಕ್ಕೆ ಮತ್ತಷ್ಟು ಶಾಕ್ ಸಾಧ್ಯತೆ?