Select Your Language

Notifications

webdunia
webdunia
webdunia
webdunia

ನಾರಾಯಣ ಮೂರ್ತಿ ಅಳಿಯ ಬ್ರಿಟನ್ ಪ್ರಧಾನಿ ಆಗ್ತಾರ?

ನಾರಾಯಣ ಮೂರ್ತಿ ಅಳಿಯ ಬ್ರಿಟನ್ ಪ್ರಧಾನಿ ಆಗ್ತಾರ?
ಲಂಡನ್ , ಶನಿವಾರ, 15 ಜನವರಿ 2022 (12:28 IST)
ಲಂಡನ್ : ಬೋರಿಸ್ ಜಾನ್ಸನ್ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಎಲ್ಲಾ ಸಾಧ್ಯತೆಗಳಿದ್ದು,

ಒಂದು ವೇಳೆ ಬೋರಿಸ್ ಜಾನ್ಸನ್  ಅಧಿಕಾರದಿಂದ ಕೆಳಗಿಳಿದರೆ ಮುಂದಿನ ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಾಕ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಯಿದೆ.

ಕೋವಿಡ್ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮದ್ಯದ ಪಾರ್ಟಿ ಮಾಡಿರುವ ವಿವಾದದಲ್ಲಿ ಸಿಲುಕಿರುವ ಪ್ರಧಾನಿ ಬೋರಿಸ್ ಜಾನ್ಸನ್ಗೆ ಸ್ವಪಕ್ಷದಲ್ಲೇ ರಾಜಿನಾಮೆ ನೀಡುವಂತೆ ಒತ್ತಡ ನಿರ್ಮಾಣವಾಗಿದೆ.

2020ರ ಮೇ ತಿಂಗಳಿನಲ್ಲಿ ಇಂತಹ ವಿವಾದಕ್ಕೆ ಸಿಲುಕಿದ್ದ ಪ್ರಧಾನಿ ಬಳಿಕವೂ 2021ರಲ್ಲಿ ಬ್ರಿಟನ್ ರಾಜಕುಮಾರ ಫಿಲಿಪ್ (ರಾಣಿ ಎಲಿಜಬೆತ್ರ ಪತಿ)ರ ಅಂತ್ಯಕ್ರಿಯೆಗೂ ಮುನ್ನ ಮದ್ಯದ ಪಾರ್ಟಿ ಮಾಡಿರುವುದಾಗಿ ಆರೋಪ ಈಗ ಕೇಳಿ ಬಂದಿದೆ. 

ಸದ್ಯ ಬೋರಿಸ್ ಜಾನ್ಸನ್ಗೆ ಅಧಿಕಾರದಿಂದ ಕೆಳಗೆ ಇಳಿಯುವಂತೆ ಹಲವು ಕಡೆಗಳಿಂದ ಒತ್ತಡ ಇರುವಾಗ ಭಾರತೀಯ ರಿಷಿ ಸುನಾಕ್ ಮುಂದಿನ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಮುಂದಿನ ಪ್ರಧಾನಿಯಾಗುವವರ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ರಿಷಿಯವರ ಹೆಸರು ಇದೆ ಎಂದು ವರದಿಯಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಾದಯಾತ್ರೆ ಎಫೆಕ್ಟ್ ಏನಾಯ್ತು ನೋಡಿ?