ಕಾಬೂಲ್: ಅಫ್ಘಾನಿಸ್ಥಾನದಲ್ಲಿ ಹೊಸ ವರ್ಷ ಆಚರಿಸುತ್ತಿರುವ ಸಂದರ್ಭದಲ್ಲಿ ಉಗ್ರರು ಕಾಬೂಲ್‌ನ ಆಸ್ಪತ್ರೆಯೊಂದರ ಬಳಿ ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆಸಿದ್ದು  ಕನಿಷ್ಠ 26 ಮಂದಿ ನಾಗರಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. 
									
			
			 
 			
 
 			
					
			        							
								
																	
ಕಾಬೂಲ್ ವಿಶ್ವವಿದ್ಯಾಲಯ ಮತ್ತು ಅಲಿ ಅಬಾದ್ ಆಸ್ಪತ್ರೆಯ ಬಳಿ ಕಾರ್‌ನಲ್ಲಿ ಬಂದ ಆತ್ಮಾಹುತಿ ದಾಳಿಕೋರನೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿರುವುದಾಗಿ ವರದಿಯಾಗಿದೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. 
									
										
								
																	
	ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ