ವಾಷಿಂಗ್ಟನ್ : ವೃದ್ಧರು ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ನೀಡಲು ಅಮೆರಿಕದ ರೋಗಗಳ ನಿಯಂತ್ರಣ ಕೇಂದ್ರ (ಸಿಡಿಸಿ) ಒಪ್ಪಿಗೆ ನೀಡಿದೆ.
Photo Courtesy: Google
ಈ ಸಂಬಂಧ ತಜ್ಞರ ಸಮಿತಿ ನೀಡಿರುವ ಶಿಫಾರಸುಗಳಿಗೆ ಸಿಡಿಸಿ ನಿರ್ದೇಶಕ ಡಾ.ರಾಶೆಲ್ ವ್ಯಾಲೆನ್ಸ್ಕಿ ಗುರುವಾರ ಅಂಕಿತ ಹಾಕಿದ್ದಾರೆ. ಹೀಗಾಗಿ, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಮತ್ತೊಂದು ಬೃಹತ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
'65 ವರ್ಷಕ್ಕಿಂತ ಮೇಲ್ಪಟ್ಟವರು, ನರ್ಸಿಂಗ್ ಹೋಂಗಳಲ್ಲಿ ದಾಖಲಾದವರು, ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿರುವ 50-64 ವಯೋಮಾನದವರಿಗೆ ಬೂಸ್ಟರ್ ಡೋಸ್ ನೀಡಬೇಕು' ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ.
'ಫೈಜರ್ ಕಂಪನಿಯ ಲಸಿಕೆ ತೆಗೆದುಕೊಂಡು ಕನಿಷ್ಠ 6 ತಿಂಗಳು ಆಗಿದ್ದರೆ, ಅಂಥವರಿಗೆ ಬೂಸ್ಟರ್ ಡೋಸ್ ನೀಡಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.