ಬೀಜಿಂಗ್: ಚೀನಾದಲ್ಲಿ ಕೋವಿಡ್ 19 ಹೋಲುವ HMP ವೈರಾಣು ಹರಡುತ್ತಿದ್ದು, ಆಸ್ಪತ್ರೆಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ ಎನ್ನುವ ಊಹಪೋಹಕ್ಕೆ ಚೀನಾ ಸರ್ಕಾರ ಕೊನೆಗೂ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಚೀನಾ, ಚಳಿಗಾಲದಲ್ಲಿ ಉಸಿರಾಟ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಚಳಿಗಾಲದಲ್ಲಿ ಉಸಿರಾಟ ಸಂಬಂಧಿ ಕಾಯಿಲೆಯ ಪ್ರಕರಣಗಳ ಸಂಖ್ಯೆ ಕಡಿಮೆಯಿದೆ. ಹೀಗಾಗಿ ವಿದೇಶಿಗರು ಚೀನಾಕ್ಕೆ ಬರಲು ಸುರಕ್ಷಿತವಾಗಿದೆ ವಿದೇಶಾಂಗ ಸಚಿವಾಲಯ ಹೇಳಿದೆ.
ಚಳಿಗಾಲದಲ್ಲಿ ಚೀನಾದ ಉತ್ತರ ಭಾಗದಲ್ಲಿ ಉಸಿರಾಟಕ್ಕೆ ಸಂಬಂಧಿಸಿದ ಸೋಂಕು ಹರಡುವುದು ಹೆಚ್ಚು. ಚೀನಾದ ಜನತೆ ಮತ್ತು ವಿದೇಶಿಗರ ಆರೋಗ್ಯದ ಬಗ್ಗೆ ಸರ್ಕಾರ ಕಾಳಜಿವಹಿಸಲಿದೆ ಎಂದು ಭರವಸೆ ನೀಡುತ್ತೇನೆ.
ವಿದೇಶಿಗರು ಯಾವುದೇ ಭಯವಿಲ್ಲದೆ ಚೀನಾಗೆ ಬರಬಹುದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾಹೋ ನಿಂಗ್ ಮಾಧ್ಯಮಗಳನ್ನು ಉದ್ದೇಶಿಸಿ ಹೇಳಿದ್ದಾರೆ.