Publish Date: Tue, 02 Aug 2022 (10:13 IST)
Updated Date: Tue, 02 Aug 2022 (11:01 IST)
ಚೆನ್ನೈ : ಚಾಕೊಲೇಟ್ಗಳ ಜೊತೆಗೆ 20.5 ಕೆಜಿ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ 58 ವರ್ಷದ ವ್ಯಕ್ತಿಯನ್ನು ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಅರಿವೋಲಿ ನಗರದ ಕೆ.ಬಾಲಾಜಿ ಎಂದು ಗುರುತಿಸಲಾಗಿದ್ದು, ಈತನೊಂದಿಗೆ ಇನ್ನೂ 15 ಮಂದಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.
ಇದೀಗ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 272, 273, 328 ಮತ್ತು (ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ) ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.