Publish Date: Wed, 11 May 2022 (15:00 IST)
Updated Date: Wed, 11 May 2022 (21:02 IST)
ವಾಷಿಂಗ್ಟನ್ : ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ.
ಬಿಲ್ ಗೇಟ್ಸ್ ಅವರು ಸಂಪೂರ್ಣ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಈಗ ಕೋವಿಡ್ಗೆ ಒಳಗಾಗಿದ್ದು, ವೈದ್ಯಕೀಯ ಆರೈಕೆಯಲ್ಲಿದ್ದಾರೆ.
ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ. ನಾನು ಸೌಮ್ಯವಾದ ರೋಗಲಕ್ಷಣಗಳನ್ನು ಅನುಭವಿಸುತ್ತಿದ್ದೇನೆ. ನಾನು ಮತ್ತೆ ಗುಣಮುಖನಾಗುವವರೆಗೆ ಪ್ರತ್ಯೇಕವಾಗಿರುವುದರ ಮೂಲಕ ತಜ್ಞರ ಸಲಹೆಯನ್ನು ಅನುಸರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿ ಬಿಲ್ ಗೇಟ್ಸ್ ತಿಳಿಸಿದ್ದಾರೆ.
ಅದೃಷ್ಟವಶಾತ್ ನಾನು ಕೋವಿಡ್ ಲಸಿಕೆ ಪಡೆದಿದ್ದೇನೆ. ಉತ್ತಮ ಚಿಕಿತ್ಸೆ ಪಡೆಯುವ ಅವಕಾಶಗಳು ಇರುವುದು ನನ್ನನ್ನು ಭಯ ಮುಕ್ತನನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ.