Publish Date: Mon, 14 Mar 2022 (08:47 IST)
Updated Date: Mon, 14 Mar 2022 (09:02 IST)
ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೆ ಭಾನುವಾರ ಕೋವಿಡ್-19 ಸೋಂಕು ದೃಢಪಟ್ಟಿದೆ.
ನನಗೆ ಒಂದೆರಡು ದಿನಗಳಿಂದ ಗಂಟಲು ಕಟ್ಟಿಕೊಂಡಿದೆ. ಅದನ್ನು ಬಿಟ್ಟರೆ ನಾನು ಕ್ಷೇಮವಾಗಿದ್ದೇನೆ. ಮಿಚೆಲ್ ಮತ್ತು ನಾನು ಲಸಿಕೆಯನ್ನು ಹಾಕಿಸಿಕೊಂಡಿದ್ದು ಒಳ್ಳೆಯದಾಯಿತು. ಇದರಿಂದ ಅವರಿಗೆ ಕೊರೊನಾ ಟೆಸ್ಟ್ ಮಾಡಿದಾಗ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ನೀವು ಈಗಲೂ ಲಸಿಕೆ ಹಾಕಿಸಿಕೊಳ್ಳದಿದ್ದರೆ, ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಸಹ ಲಸಿಕೆ ಹಾಕಿಸಿಕೊಳ್ಳುವುದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ತಿಳಿಸಿದ್ದಾರೆ.