Select Your Language

Notifications

webdunia
webdunia
webdunia
webdunia

ಡ್ರಾಮಾ ನೋಡಿದ್ದ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ

ಡ್ರಾಮಾ ನೋಡಿದ್ದ ಇಬ್ಬರು ಅಪ್ರಾಪ್ತರಿಗೆ ಮರಣದಂಡನೆ
ಪ್ಯೊಂಗ್ಯಾಂಗ್ , ಮಂಗಳವಾರ, 6 ಡಿಸೆಂಬರ್ 2022 (14:23 IST)
ಪ್ಯೊಂಗ್ಯಾಂಗ್ : ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮಾವನ್ನು ವೀಕ್ಷಿಸಿದ ಹಿನ್ನೆಲೆಯಲ್ಲಿ ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ.

ಉತ್ತರ ಕೊರಿಯಾದ ರಿಯಾಂಗ್ಗಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಈ ಭಾಗವು ಚೀನಾದ ಗಡಿ ಭಾಗದ ಸಮೀಪವಿದೆ.

ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸುಲಭವಾಗಿ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಸಿನಿಮಾಗಳು ಸುಲಭವಾಗಿ ಸಿಗುತ್ತವೆ. ಈ ಹಿನ್ನೆಲೆಯಲ್ಲಿ ಈ ಇಬ್ಬರು ವಿದ್ಯಾರ್ಥಿಗಳಿಗೂ ಕೆ- ಡ್ರಾಮಾ ದೊರೆತಿದಿದ್ದು, ಇದನ್ನು ವೀಕ್ಷಿಸಿದ್ದಾರೆ.

ತಾವು ವೀಕ್ಷಿಸಿದ ದಕ್ಷಿಣ ಕೊರಿಯಾದ ಕೆ-ಡ್ರಾಮಾವನ್ನು ಈ ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರಿಗೂ ನೀಡಿದ್ದಾರೆ. ಆದರೆ ಉತ್ತರ ಕೋರಿಯಾದಲ್ಲಿ ದಕ್ಷಿಣ ಕೋರಿಯಾದ ಸಿನಿಮಾ, ಡ್ರಾಮಾವನ್ನು ವೀಕ್ಷಿಸುವುದು ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ಕಿಮ್ ಜಾಂಗ್ ಉನ್ ಸರ್ಕಾರವು ಆ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳನ್ನು ಗಲ್ಲಿಗೇರಿಸಿದ್ದಾರೆ ಎಂದು ವರದಿ ತಿಳಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಗಡಿ ವಿವಾದ ಜೀವಂತವಾಗಿಡಲು ಪುಂಡಾಟಿಕೆ ಮಾಡುತ್ತಿದೆ : ಸಿದ್ದರಾಮಯ್ಯ