Publish Date: Fri, 27 Oct 2023 (12:41 IST)
Updated Date: Fri, 27 Oct 2023 (12:44 IST)
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಗುಣಮಟ್ಟ ಕುಸಿದು ಜನರು ಉಸಿರಾಡಲು ಕಷ್ಟಪಡುವ ಪರಿಸ್ಥಿತಿ ಎದುರಾಗಿದೆ. ಸತತ 4ನೇ ದಿನವೂ ಗಾಳಿಯ ಗುಣಮಟ್ಟ ಕಳಪೆ ಸ್ಥಿತಿಯಲ್ಲೇ ಮುಂದುವರೆದಿದೆ. ಮಂಗಳವಾರ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚಿ 238ರಷ್ಟಿತ್ತು.ಇನ್ನು ಮುಂದಿನ ಐದಾರು ದಿನಗಳ ಕಾಲ ಇದೇ ಪರಿಸ್ಥಿತಿ ಇರಲಿದೆ ಎಂದು ಅಧ್ಯಯನ ಸಂಸ್ಥೆಗಳು ತಿಳಿಸಿವೆ.