ನವದೆಹಲಿ(ಜು.30): ದೇಶದಲ್ಲಿ ಅದರಲ್ಲೂ ಪ್ರಮುಖವಾಗಿ ಕೇರಳದಲ್ಲಿ ಕೊರೋನಾ ವೈರಸ್ ಪ್ರಕರಣ ಹೆಚ್ಚಾಗುತ್ತಿದೆ. ಇದರಿಂದ ಕರ್ನಾಟಕದಲ್ಲೂ ಆತಂಕ ಹೆಚ್ಚಾಗಿದೆ. ಇದು 3ನೇ ಅಲೆ ಮುನ್ಸೂಚನೆ ಅನ್ನೋ ಮಾತುಗಳು ಬಲವಾಗುತ್ತಿದೆ. ಇದರ ಬೆನ್ನಲ್ಲೇ ಅಮೆರಿಕ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಹಾಗೂ ಪ್ರಿವೆನ್ಶನ್ ಡೆಲ್ಟಾ ವೈರಸ್ ಹಾಗೂ 3ನೇ ಅಲೆ ಕುರಿತು ಮಹತ್ವದ ಎಚ್ಚರಿಕೆ ನೀಡಿದೆ.