ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

Sampriya
ಗುರುವಾರ, 14 ಆಗಸ್ಟ್ 2025 (15:08 IST)
ಮಂಗಳೂರು: ಧರ್ಮಸ್ಥಳದ ಸುತ್ತಾ ಮುತ್ತಾ ಶವಗಳನ್ನು ಹೂತಿಟ್ಟ ಆರೋಪ ಸಂಬಂಧ ಇದೀಗ ಎಸ್‌ಐಟಿ ತನಿಖೆ ನಿರ್ಣಾಯಕ ಹಂತಕ್ಕೆ ತಲುಪುತ್ತಿದ್ದ ಹಾಗೇ ಸಾಕ್ಷ್ಯಿ ದೂರುದಾರ ಅಧಿಕಾರಿಗಳಿಗೆ ಕನ್ಯಾಡಿ ಬಳಿ ಹೊಸ ಜಾಗವನ್ನು ಗುರುವಾರ ತೋರಿಸಿದ್ದು, ಅಲ್ಲಿ ಶೋಧ ಕಾರ್ಯ ಮುಂದುವರಿದಿದೆ.

ನೇತ್ರಾವತಿ ನದಿ ಪಕ್ಕದಲ್ಲಿರುವ ಈ ಜಾಗಕ್ಕೆ ಖಾಸಗಿ ಅಡಿಕೆ ತೋಟವೊಂದರ ಮೂಲಕ ಸಾಗಬೇಕಿದೆ. 

ಉಜಿರೆ– ಧರ್ಮಸ್ಥಳ ರಸ್ತೆಯಿಂದ ಸುಮಾರು 1 ಕಿ.ಮೀ ದೂರವನ್ನು ಕಿರಿದಾದ ರಸ್ತೆಯಲ್ಲಿ ಕ್ರಮಿಸಿದ ಬಳಿಕ ಈ ಜಾಗ ಸಿಗುತ್ತದೆ. ಈ ಜಾಗ ಸ್ನಾನಘಟ್ಟದ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯ ಇನ್ನೊಂದು ಬದಿಯಲ್ಲಿ ಈ ಜಾಗ ಇದೆ. ಎಸ್‌ಐಟಿ ಸಿಬ್ಬಂದಿ
ಸಾಕ್ಷಿ ದೂರುದಾರ ಜೊತೆಗೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಾಗವನ್ನು ತಲುಪಿದರು.

ಎಂದಿನಂತೆ ಇಂದು ಕೂಡಾ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್‌ ಹಾಗೂ ಎಸ್‌ಐಟಿ ಎಸ್‌ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಹಾಗೂ ನೆಲ ಅಗೆಯುವ ಕಾರ್ಮಿಕರು ದೂರುದಾರನೊಂದಿಗೆ ಸ್ಥಳಕ್ಕೆ ತೆರಳಿದ್ದಾರೆ. ನೆಲವನ್ನು ಅಗೆಯುವ ಯಂತ್ರವನ್ನೂ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಈ ಜಾಗಕ್ಕೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರಾಕರಿಸಲಾಗಿದೆ.

ದೂರುದಾರ ಧರ್ಮಸ್ಥಳದ ಸುತ್ತಾ ಮುತ್ತಾ ಹಲವು ಶವಗಳನ್ನು ಹೂತಿಟ್ಟ ಆರೋಪ ಸಂಬಂಧ ಆತ ಗುರುತಿಸಿದ  17 ಪಾಯಿಂಟ್‌ನಲ್ಲಿ ಈಗಾಗಲೇ ಶೋಧ ಕಾರ್ಯ ನಡೆಸಿದ್ದಾರೆ. ಕಳೇಬರಹ ಉತ್ಖನನ ಸಂದರ್ಭದಲ್ಲಿ 6ನೇ ಪಾಯಿಂಟ್‌ನಲ್ಲಿ ಬಿಟ್ಟರೇ ಬೇರಲ್ಲೂ ಮೂಳೆಗಳು ಪತ್ತೆಯಾಗಿಲ್ಲ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments