Webdunia - Bharat's app for daily news and videos

Install App

ಮಗು ಅಳುವುದನ್ನು ಸಹಿಸಲಾಗದೆ ಈ ಮಹಾತಾಯಿ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 28 ಅಕ್ಟೋಬರ್ 2018 (07:18 IST)
ವಾಷಿಂಗ್ ಟನ್ : ಮಗು ಜೋರಾಗಿ ಅತ್ತಾಗ ಓಡಿ ಬಂದು ಮಗುವನ್ನು ಎತ್ತಿಕೊಂಡು ಮಡಿಲಲ್ಲಿ ಮಲಗಿಸಿಕೊಂಡು ಅದನ್ನು ಸಂತೈಸುವ ತಾಯಂದಿರನ್ನು ನಾವು ಯಾವಾಗಲೂ ನೋಡುತ್ತಿರುತ್ತೇವೆ. ಆದರೆ ಅರಿಝೋನಾದಲ್ಲಿ  ತಾಯಿಯೊಬ್ಬಳು ತಾನು ಹೆತ್ತ ಮಗು ಅಳೋದನ್ನ ಕೇಳಲಾಗದೆ ಮಾಡಿದ ನೀಚಕೃತ್ಯವನ್ನು ಕೇಳಿದ್ರೆ ನೀವೇ ಶಾಕ್ ಆಗ್ತೀರಾ.


ಹೌದು. 19 ವರ್ಷದ ಜೆನ್ನಾ ಫೊಲ್‍ವೆಲ್ ಎಂಬಾಕೆ ತನ್ನ ಮಗು ಅಳುವುದನ್ನು ಸಹಿಸಲಾಗದೆ ಆ ಒಂದು ತಿಂಗಳ ಹಸುಗೂಸನ್ನು ಬಾತ್ ಟಬ್ ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ನಂತರ ಪೊಲೀಸರಿಗೆ ಕರೆ ಮಾಡಿ ತನ್ನ ಮಗುವನ್ನ ಅಪಹರಿಸಿದ್ದಾರೆ ಎಂದು ದೂರು ನೀಡಿ, ಮಗುವಿನ ಮೃತದೇಹವನ್ನ ಬ್ಯಾಗಿನಲ್ಲಿ ಇರಿಸಿ, ಪಾರ್ಕ್ ನಲ್ಲಿ ಎಸೆಯೋದಕ್ಕೆ ಮುಂದಾಗಿದ್ದಳಂತೆ.


ತನಿಖೆಯ ವೇಳೆ ಈ ವಿಚಾರ ತಿಳಿದ ಪೊಲೀಸರು ಕೊಲೆ ಆರೋಪದ ಅಡಿಯಲ್ಲಿ ಆಕೆಯನ್ನು ಬಂಧಿಸಿದ್ದಾರೆ. ಅಲ್ಲದೇ ಆಕೆ ಮಗುವನ್ನು ಕೊಲೆ ಮಾಡುವುದಕ್ಕೂ ಮುನ್ನ ಮಗುವನ್ನು ಹೇಗೆ ಕೊಲೆ ಮಾಡಬೇಕು. ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾಯಿಸುವುದಕ್ಕೆ ಎಷ್ಟು ಸಮಯ ಬೇಕು, ಪಾಲಕರು ಮಗುವನ್ನು ಕೊಲ್ಲುವುದಕ್ಕೆ ಕಾರಣವೇನು ಎಂಬೆಲ್ಲಾ ವಿಷಯಗಳ ಬಗ್ಗೆ ಗೂಗಲ್‍ನಲ್ಲಿ ಹುಡುಕಾಟ ನಡೆಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಈ ಕೃತ್ಯದ ಬಗ್ಗೆ ತಿಳಿದ ಆಕೆಯ ಪತಿ  ಎರಿಕ್ ತೀವ್ರ ಆಘಾತಕ್ಕೆ ಒಳಗಾಗಿದ್ದು, ಆಕೆಗೇ ಕಠಿಣ ಶಿಕ್ಷೆ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments