ಡಾಕಾ: ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಎದೆ ಹಾಲು ನೀಡಬೇಕೆಂಬ ಉದ್ದೇಶದಿಂದ ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾದ ಬಾಂಗ್ಲಾದೇಶ ಇದೀಗ ಈ ನಿರ್ಧಾರದಿಂದ ಹಿಂದೆ ಸರಿದಿದೆ.
ಹೌದು. ಈ ದೇಶದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಅನಾಥ ಮಕ್ಕಳಿಗೆ ಹಾಗೂ ಕೆಲಸಕ್ಕೆ ಹೋಗುವ ಮಹಿಳೆಯರ ಮಕ್ಕಳಿಗೆ ಎದೆಹಾಲು ನೀಡಬೇಕೆಂದು ಬಾಂಗ್ಲಾದೇಶ ಎದೆ ಹಾಲಿನ ಬ್ಯಾಂಕ್ ಸ್ಥಾಪಿಸಲು ಮುಂದಾಗಿತ್ತು.
ಆದರೆ ಮುಸ್ಲಿಂರೇ ಹೆಚ್ಚಾಗಿರುವ ಈ ದೇಶದಲ್ಲಿ ಈ ಯೋಜನೆ ಮುಸ್ಲಿಂ ಧರ್ಮಕ್ಕೆ ವಿರುದ್ಧವಾಗಿದೆ ಎಂದು ಮುಸ್ಲಿಂಧರ್ಮಗುರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಈ ಯೋಜನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.