ನ್ಯೂಯಾರ್ಕ್: ತಮಗೆ ನೊಬೆಲ್ ಪ್ರಶಸ್ತಿ ಕೊಡಬೇಕು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವೇ ಎಲ್ಲಾ ಬಿಟ್ಟು ಅಂಗಲಾಚುತ್ತಿದ್ದಾರೆ. ವಿಶ್ವಸಂಸ್ಥೆಯ ಮುಂದೆಯೂ ನೊಬೆಲ್ ಗೆ ತಾನು ಅರ್ಹ ಎಂದು ತಮ್ಮ ಬೆನ್ನು ತಾವೇ ತಟ್ಟಿಕೊಂಡಿದ್ದಾರೆ.
ನಿನ್ನೆ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ್ದ ಡೊನಾಲ್ಡ್ ಟ್ರಂಪ್ ತಮ್ಮ ಕೆಲಸಗಳ ಬಗ್ಗೆ ತಾವೇ ಹೊಗಳಿಕೊಂಡಿದ್ದಾರೆ. ವಿಶ್ವದ ಎಲ್ಲಾ ಯುದ್ಧಗಳನ್ನು ತಾನೇ ನಿಲ್ಲಿಸಿದ್ದು ಎಂದು ಕೊಚ್ಚಿಕೊಂಡಿದ್ದಾರೆ. ಹೀಗಾಗಿಯೇ ನನಗೆ ನೊಬೆಲ್ ಪ್ರಶಸ್ತಿ ಬರಬೇಕು ಎಂದು ನಾಚಿಕೆಬಿಟ್ಟು ಅಂಗಲಾಚಿದ್ದಾರೆ.
ಭಾರತ-ಪಾಕಿಸ್ತಾನ ಸೇರಿದಂತೆ ವಿಶ್ವದಲ್ಲಿ 7 ಯುದ್ಧಗಳನ್ನು ನಾನು ನಿಲ್ಲಿಸಿದ್ದೇನೆ. ನನ್ನ ಈ ಕಾರ್ಯವನ್ನು ಪರಿಗಣಿಸಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು ಎಂದು ಡೊನಾಲ್ಡ್ ಟ್ರಂಪ್ ನೇರವಾಗಿಯೇ ವಿಶ್ವಸಂಸ್ಥೆಯಲ್ಲಿ ದುಂಬಾಲು ಬಿದ್ದಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳೂ ನಾವು ಮೂರನೆಯವರ ಸಹಾಯ ಪಡೆದಿಲ್ಲ. ನಾವೇ ಮಾತುಕತೆ ನಡೆಸಿ ಕದನ ವಿರಾಮ ಘೋಷಿಸಿದ್ದೆವು ಎಂದರೂ ಟ್ರಂಪ್ ಮಾತ್ರ ತಮಗೇ ಕ್ರೆಡಿಟ್ ಸಲ್ಲಬೇಕು ಎಂದು ಕೊಚ್ಚಿಕೊಳ್ಳುತ್ತಲೇ ಇದ್ದಾರೆ.