Select Your Language

Notifications

webdunia
webdunia
webdunia
webdunia

ಅಮೆರಿಕಾದಲ್ಲಿ ಇಂದಿನಿಂದ ಮತ್ತೆ ಡೊನಾಲ್ಡ್ ಟ್ರಂಪ್ ಯುಗಾರಂಭ: ಭಾರತದಿಂದ ವಿಶೇಷ ಆಹ್ವಾನಿತರು ಯಾರು ನೋಡಿ

Donald Trump

Krishnaveni K

ವಾಷಿಂಗ್ಟನ್ , ಸೋಮವಾರ, 20 ಜನವರಿ 2025 (11:56 IST)
ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷರಾಗಿ ಇಂದು ಮತ್ತೊಮ್ಮೆ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. ಭಾರತದಿಂದ ವಿಶೇಷ ಆಹ್ವಾನಿತರಾಗಿ ಹೋಗಿರುವವರು ಯಾರು ನೋಡಿ.


ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರಕ್ಕೆ ಕೆಲವೇ ಕ್ಷಣಗಳು ಬಾಕಿಯಿದೆ. ಭಾರತೀಯ ಕಾಲಮಾನ ಪ್ರಕಾರ ರಾತ್ರಿ 10.30 ಕ್ಕೆ ಟ್ರಂಪ್ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ತಮ್ಮ ತಾಯಿ ಬಾಲ್ಯದಲ್ಲಿ ನೀಡಿದ್ದ ಬೈಬಲ್ ಮೇಲೆ ಕೈಯಿಟ್ಟು ಪ್ರಮಾಣ ಮಾಡುವ ಮೂಲಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಅಮೆರಿಕಾದಲ್ಲಿ ವಿಪರೀತ ಚಳಿಯಿರುವುದರಿಂದ ಈ ಬಾರಿ ಸಂಸತ್ತಿನ ಒಳಗೇ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವಿಶ್ವದ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಇದರಲ್ಲಿ ಭಾರತದ ಉದ್ಯಮಿ ಮುಕೇಶ್ ಅಂಬಾನಿ ದಂಪತಿಯೂ ಸೇರಿದ್ದಾರೆ. ಅವರ ಜೊತೆಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡಾ ಭಾಗಿಯಾಗಲಿದ್ದಾರೆ.

ಡೊನಾಲ್ಡ್ ಟ್ರಂಪ್ ಇದು ಎರಡನೇ ಬಾರಿಗೆ ಅಮೆರಿಕಾ ಅಧ್ಯಕ್ಷರಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಅಮೆರಿಕಾ ಅಧ್ಯಕ್ಷ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅಭೂತಪೂರ್ವ ಗೆಲುವು ಸಾಧಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

Kumbhmela: ಕುಂಭಮೇಳಕ್ಕೆ ಹೋದರೆ ಮರೆಯದೇ ಮನೆಗೆ ತರಬೇಕಾದ ವಸ್ತುಗಳು