ಎರಡನೇ ಬಾರಿ ಅಧ್ಯಕ್ಷರಾದ ಬಳಿಕ ಅಮೆರಿಕನ್ನರಿಗೆ ಈ ಪ್ರಾಮಿಸ್ ಮಾಡಿದ ಡೊನಾಲ್ಡ್ ಟ್ರಂಪ್

Sampriya
ಬುಧವಾರ, 6 ನವೆಂಬರ್ 2024 (14:43 IST)
Photo Courtesy X
ವಾಷಿಂಗ್ಟನ್‌: ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಅವರು ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೆ ಚುನಾಯಿತರಾದ ಬೆನ್ನಲ್ಲೇ ಟ್ರಂಪ್​ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದರು.

ಮೇಕ್ ಅಮೆರಿಕ ಗ್ರೇಟ್ ಅಗೇನ್ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್, ನಾನು ಪ್ರತಿ ಕ್ಷಣವೂ ಅಮೆರಿಕಕ್ಕಾಗಿ ದುಡಿಯುತ್ತೇನೆ ಎಂದು ಪುನರುಚ್ಚರಿಸಿದ್ದಾರೆ.

ಇದು ನನ್ನ ಜೀವನದ ಅತ್ಯಂತ ಮಹತ್ವದ ಕ್ಷಣವಾಗಿದ್ದು, ನನ್ನ ಸರ್ವಸ್ವವನ್ನು ಅಮೆರಿಕಕ್ಕೆ ಸಮರ್ಪಿಸಲಾಗಿದೆ. ನಾನು ಪ್ರತಿಯೊಬ್ಬ ನಾಗರಿಕರಿಗಾಗಿ, ನಿಮಗಾಗಿ, ನಿಮ್ಮ ಕುಟುಂಬಕ್ಕಾಗಿ ಮತ್ತು ನಿಮ್ಮ ಭವಿಷ್ಯಕ್ಕಾಗಿ ಹೋರಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.

ಪ್ರತಿದಿನ, ನನ್ನ ದೇಹದ ಪ್ರತಿ ಉಸಿರಿನೊಂದಿಗೆ ನಾನು ನಿಮಗಾಗಿ ಹೋರಾಡುತ್ತೇನೆ. ನಾವು ನಮ್ಮ ಮಕ್ಕಳಿಗೆ ನೀವು ಅರ್ಹವಾದ ಬಲವಾದ, ಸುರಕ್ಷಿತ ಮತ್ತು ಸಮೃದ್ಧ ಅಮೆರಿಕವನ್ನು ನೀಡುವವರೆಗೂ ನಾನು ವಿಶ್ರಮಿಸುವುದಿಲ್ಲ.

ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ತಮ್ಮ ಭಾಷಣದಲ್ಲಿ ಉದ್ಯಮಿ ಎಲಾನ್ ಮಸ್ಕ್ ಹೆಸರನ್ನೂ ಪ್ರಸ್ತಾಪಿಸಿದ್ದಾರೆ. ತಮ್ಮ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ. ಎಲಾನ್ ಮಸ್ಕ್ ಅವರು ಚುನಾವಣೆಯಲ್ಲಿ ಟ್ರಂಪ್ ಅವರನ್ನು ಉತ್ಸಾಹದಿಂದ ಬೆಂಬಲಿಸಿದ್ದಾರೆ ಮತ್ತು ಹಣವನ್ನು ಸಹ ಒದಗಿಸಿದ್ದಾರೆ ಎಂದರು.

ಅಮೆರಿಕದ 47ನೇ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ಡೊನಾಲ್ಡ್ ​ಟ್ರಂಪ್​ಗೆ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments