ಅಮೆರಿಕಾದಿಂದ ಹೊರಡುವ ಮೊದಲು ಗೆಳೆಯ ಮೋದಿಗೆ ಡೊನಾಲ್ಡ್ ಟ್ರಂಪ್ ನೀಡಿದ ವಿಶೇಷ ಉಡುಗೊರೆ

Krishnaveni K
ಶುಕ್ರವಾರ, 14 ಫೆಬ್ರವರಿ 2025 (09:50 IST)
Photo Credit: X
ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸಾಗುತ್ತಿದ್ದಾರೆ. ಭಾರತಕ್ಕೆ ಮರಳುವ ಮುನ್ನ ಮೋದಿಗೆ ಗೆಳೆಯ ಟ್ರಂಪ್ ಕಡೆಯಿಂದ ವಿಶೇಷ ಉಡುಗೊರೆಯೊಂದು ಸಿಕ್ಕಿದೆ.

ಅಮೆರಿಕಾದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಧಿಕಾರ ಸ್ವೀಕರಿಸಿದ ಬಳಿಕ ಮೋದಿ ಮೊದಲ ಬಾರಿಗೆ ಭೇಟಿಯಾಗುತ್ತಿದ್ದಾರೆ. ಕಳೆದ ಬಾರಿ ಟ್ರಂಪ್ ಅಧ್ಯಕ್ಷರಾಗಿದ್ದ ಅಮೆರಿಕಾದಲ್ಲಿ ಮೋದಿಗಾಗಿ ಹೌಡೀ ಮೋದಿ ಕಾರ್ಯಕ್ರಮ ಮತ್ತು ಟ್ರಂಪ್ ಭಾರತಕ್ಕೆ ಭೇಟಿ ನೀಡಿದಾಗ ನಮಸ್ತೆ ಟ್ರಂಪ್ ಎಂದು ಕಾರ್ಯಕ್ರಮ ಆಯೋಜಿಸಿದ್ದರು.

ಇದೇ ಕಾರ್ಯಕ್ರಮದಲ್ಲಿ ತೆಗೆಸಿಕೊಂಡ ಸುಂದರ ಫೋಟೋವನ್ನೊಳಗೊಂಡ ‘ಅವರ್ ಜರ್ನಿ ಟುಗೆದರ್’ ಎನ್ನುವ ಪುಸ್ತಕವನ್ನು ಮೋದಿಗೆ ತಮ್ಮ ಹಸ್ತಾಕ್ಷರ ಸಮೇತ ನೀಡಿದ್ದಾರೆ ಟ್ರಂಪ್. ಇದರಲ್ಲಿ ತಮ್ಮದೇ ಕೈ ಬರಹದಲ್ಲಿ ಮಿಸ್ಟರ್ ಪ್ರೈಮ್ ಮಿನಿಸ್ಟರ್ ನೀವು ತುಂಬಾ ಗ್ರೇಟ್ ಎಂದು ಟ್ರಂಪ್ ಬರೆದಿದ್ದಾರೆ.

ಮೋದಿ-ಟ್ರಂಪ್ ಭೇಟಿ ವೇಳೆ ಉಭಯ ದೇಶಗಳ ನಡುವೆ ವ್ಯಾಪಾರ ಸಂಬಂಧ ವೃದ್ಧಿ, ರಷ್ಯಾ-ಉಕ್ರೇನ್ ಯುದ್ಧ ವಿಚಾರಗಳು ಚರ್ಚೆಗೆ ಬಂದಿವೆ. ಇಂದು ಮೋದಿ ಭಾರತಕ್ಕೆ ವಾಪಸಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments