ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಕ್ರೆಡಿಟ್ ನ್ನು ಮತ್ತೊಮ್ಮೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆ ಅದಕ್ಕೇ ಕದನ ವಿರಾಮಕ್ಕೆ ಒಪ್ಪಿಕೊಂಡರು ಎಂದಿದ್ದಾರೆ.
ಟ್ರಂಪ್ ಈ ಹೇಳಿಕೆ ಮತ್ತೆ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿದೆ. ಇದನ್ನೇ ವಿಪಕ್ಷಗಳು ಟೀಕಾಸ್ತ್ರವಾಗಿ ಬಳಸಿಕೊಳ್ಳಲಿದ್ದಾರೆ. ನಮ್ಮ ಮಧ್ಯಪ್ರವೇಶದಿಂದಲೇ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದಿದ್ದಾರೆ.
ಪರಮಾಣು ಯುದ್ಧ ಆಗಿದ್ರೆ ಲಕ್ಷಾಂತರ ಜನ ಸಾವನ್ನಪ್ಪುತ್ತಿದ್ದರು. ಇದನ್ನು ತಡೆಯುವ ಕೆಲಸವನ್ನು ನಾನು ಮಾಡಿದ್ದೇನೆ. ಒಂದು ವೇಳೆ ಕದನ ವಿರಾಮಕ್ಕೆ ಒಪ್ಪದೇ ಇದ್ದಲ್ಲಿ ನಿಮ್ಮ ಜೊತೆ ವ್ಯಾಪಾರ ಮಾಡಲ್ಲ ಎಂದು ಭಾರತ ಮತ್ತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದೆ. ಇದಕ್ಕೇ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡವು ಎಂದು ಟ್ರಂಪ್ ಹೇಳಿದ್ದಾರೆ.
ಅವರ ಹೇಳಿಕೆ ಈಗ ಭಾರತದಲ್ಲಿ ಕೋಲಾಹಲ ಸೃಷ್ಟಿಸಲಿದೆ. ಭಾರತ ಮತ್ತು ಪಾಕಿಸ್ತಾನ ವಿಚಾರದಲ್ಲಿ ಪ್ರಧಾನಿ ಮೋದಿ ಮೂರನೇ ವ್ಯಕ್ತಿಯ ಮಧ್ಯಪ್ರವೇಶಕ್ಕೆ ಅವಕಾಶ ನೀಡಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದರು. ಇದೀಗ ಟ್ರಂಪ್ ಹೇಳಿಕೆ ಭಾರತ ಅಮೆರಿಕಾ ಮುಂದೆ ತಲೆಬಾಗಿದೆ ಎಂಬ ಅರ್ಥ ನೀಡಲಿದೆ.