Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಿಗ್ಗೆ ನೇಪಾಳದಲ್ಲಿ ಕಂಪಿಸಿದ ಭೂಮಿ: ಭಾರತ-ಚೀನಾ ಗಡಿಯಲ್ಲಿ ಹೆಚ್ಚಿದ ಆತಂಕ

Strong earthquake in Nepal

Sampriya

ಕಠ್ಮಂಡು , ಶುಕ್ರವಾರ, 28 ಫೆಬ್ರವರಿ 2025 (10:18 IST)
Photo Courtesy X
ಕಠ್ಮಂಡು: ಅಸ್ಸಾಂ ಬೆನ್ನಲ್ಲೇ ನೇಪಾಳದಲ್ಲೂ ಪ್ರಬಲ ಭೂಕಂಪನ ಸಂಭವಿಸಿದೆ. ಇಂದು ಬೆಳ್ಳಂಬೆಳಿಗ್ಗೆ ನೇಪಾಳದಲ್ಲಿ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಇಂದು ಮುಂಜಾನೆ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಿಮಾಲಯನ್‌ನ ಮಧ್ಯಭಾಗದ ಸಿಂಧುಪಾಲ್‌ಚೌಕ್ ಜಿಲ್ಲೆಯಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆ ಅಸ್ಸಾಂನಲ್ಲೂ ಭೂಕಂಪನ ಉಂಟಾಗಿತ್ತು. ಯಾವುದೇ ಜೀವಹಾನಿಯ ವರದಿಯಾಗಿಲ್ಲ.

ಭೂಕಂಪದ ಕೇಂದ್ರವು ಸಿಂಧುಪಾಲ್‌ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಸ್ಥಳೀಯ ಕಾಲಮಾನ ಬೆಳಗಿನ ಜಾವ 2:51ಕ್ಕೆ ಆಗಿದೆ ಎಂದು ರಾಷ್ಟ್ರೀಯ ಭೂಕಂಪ ನಿರ್ವಹಣಾ ಮತ್ತು ಸಂಶೋಧನಾ ಕೇಂದ್ರ ತನ್ನ ವೆಬ್‌ಸೈಟ್‌ನಲ್ಲಿ ಹೇಳಿದೆ.

ನೇಪಾಳದ ಕೆಲ ಪ್ರದೇಶಗಳಲ್ಲಿ ವಿಶೇಷವಾಗಿ ಪೂರ್ವ ಮತ್ತು ಮಧ್ಯ ಪ್ರದೇಶಗಳಲ್ಲಿ, ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಭಾರತ ಮತ್ತು ಟಿಬೆಟ್, ಚೀನಾದ ಗಡಿ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಾರು ಏನೇ ಹೇಳಲಿ, ನನ್ನ ಧರ್ಮ ನನ್ನ ನಂಬಿಕೆ ನನ್ನದು: ಡಿಕೆ ಶಿವಕುಮಾರ್