Webdunia - Bharat's app for daily news and videos

Install App

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

Sampriya
ಗುರುವಾರ, 29 ಮೇ 2025 (14:17 IST)
Photo Courtesy X
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಗೆಲುವಿಗೆ ಹರಲಿರುಳು ಶ್ರಮಿಸಿದ್ದ ಎಲಾನ್ ಮಸ್ಕ್ ಇದೀಗ ಮುನಿಸಿಕೊಂಡಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಮಸ್ಕ್ ಘೋಷಿಸಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಸ್ಕ್‌ ಅವರು ಡೊನಾಲ್ಡ್‌ ಟ್ರಂಪ್‌ ಪರ ಮತಯಾಚನೆ ಮಾಡಿದ್ದರು. ನಂತರ ಟ್ರಂಪ್‌ ಅವರು ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ ಮುಖ್ಯಸ್ಥರನ್ನಾಗಿ ಮಸ್ಕ್‌ ಅವರನ್ನು ನೇಮಿಸಿದ್ದರು.

ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ನೀತಿಯನ್ನು ಟೀಕಿಸಿದ ಒಂದು ದಿನದ ಬಳಿಕ ವಿಶ್ವದ ಶ್ರೀಮಂತ ವ್ಯಕ್ತಿ, ಸ್ಪೇಸ್ ಎಕ್ಸ್ ಒಡೆತನದ ಬಿಲಿಯನೇರ್ ಎಲಾನ್ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಹುದ್ದೆಯಿಂದ ಕೆಳಗೆ ಇಳಿದಿದಿದ್ದಾರೆ. ಈ ಕುರಿತು ತಮ್ಮದೇ ಒಡೆತನದ 'ಎಕ್ಸ್' ಖಾತೆಯಲ್ಲಿ ಹೇಳಿಕೊಂಡಿದ್ದಾರೆ. 

ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ ಅವಧಿ ಕೊನೆಗೊಂಡಿದೆ. ಅನಗತ್ಯ ವೆಚ್ಚಗಳನ್ನು ಕಡಿತ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ) ಕಾಲಕ್ರಮೇಣ ಬಲಗೊಳ್ಳಲಿದ್ದು, ಸರ್ಕಾರದ ಕಾರ್ಯವಿಧಾನ ಭಾಗವಾಗಿದೆ ಎಂದು ಅವರು ಹೇಳಿದ್ದಾರೆ.

ತೆರಿಗೆ ಬಿಲ್‌ಗೆ ಸಂಬಂಧಿಸಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಟ್ರಂಪ್ ಆಡಳಿತವನ್ನು ತೊರೆಯಲು ಮಸ್ಕ್ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಯಕ್ಕಿಂತ ಖರ್ಚು ಹೆಚ್ಚುವುದು ಡಿಒಜಿಇ ದಕ್ಷತೆಯ ಮೇಲೆ ಪರಿಣಾಮ ಬೀರಲಿದ್ದು, ದುರ್ಬಲಗೊಳಿಸಲಿದೆ ಎಂದು ಟ್ರಂಪ್ ತೀರ್ಮಾನದ ವಿರುದ್ಧ ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಎರಡನೇ ಅವಧಿಗೆ ಅಮೆರಿಕದ ಚುಕ್ಕಾಣಿ ಹಿಡಿದ ಡೊನಾಲ್ಡ್ ಟ್ರಂಪ್, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದ ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಅವರನ್ನು ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ (ಡಿಒಜಿಇ)ಯ ಉಸ್ತುವಾರಿಯಾಗಿ ನೇಮಿಸಿದ್ದರು. ಆಡಳಿತ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಅನಗತ್ಯ ವೆಚ್ಚಗಳನ್ನು ಕಡಿತ ಮಾಡುವುದು ಈ ಇಲಾಖೆಯ ಉದ್ದೇಶವಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments