Select Your Language

Notifications

webdunia
webdunia
webdunia
webdunia

ಮತ್ತೆ ವಿಶ್ವದ ನಂ.1 ಶ್ರೀಮಂತ ಎಲೋನ್ ಮಸ್ಕ್

ಮತ್ತೆ ವಿಶ್ವದ ನಂ.1 ಶ್ರೀಮಂತ ಎಲೋನ್ ಮಸ್ಕ್
ವಾಷಿಂಗ್ಟನ್ , ಬುಧವಾರ, 1 ಮಾರ್ಚ್ 2023 (11:56 IST)
ವಾಷಿಂಗ್ಟನ್ : ಕಳೆದ 2 ತಿಂಗಳ ಹಿಂದೆ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಇಳಿದಿದ್ದ ಟೆಸ್ಲಾ ಹಾಗೂ ಟ್ವಿಟ್ಟರ್ ಸಿಇಒ ಎಲೋನ್ ಮಸ್ಕ್ ಇದೀಗ ಮತ್ತೆ ನಂ.1 ಸ್ಥಾನವನ್ನು ಮರಳಿ ಪಡೆದಿದ್ದಾರೆ.
 
ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಎಲೋನ್ ಮಸ್ಕ್ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಬಿರುದನ್ನು ಮರಳಿ ಪಡೆದಿದ್ದಾರೆ.

ಕಳೆದ ವರ್ಷ ಡಿಸೆಂಬರ್ನಲ್ಲಿ ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ ಲೂಯಿ ವಿಟಾನ್ನ ಸಿಇಒ ಬರ್ನಾರ್ಡ್ ಅರ್ನಾಲ್ಟ್ ಅವರು ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಸ್ಥಾನವನ್ನು ಪಡೆದಿದ್ದರು. ಇದೀಗ 2 ತಿಂಗಳು ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಮಸ್ಕ್ ಮತ್ತೆ ಮೊದಲನೇ ಸ್ಥಾನಕ್ಕೆ ಮರಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ