ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

Sampriya
ಮಂಗಳವಾರ, 2 ಡಿಸೆಂಬರ್ 2025 (20:13 IST)
Photo Credit X
ಇಸ್ಲಾಮಾಬಾದ್‌: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ದ್ವೀಪ ರಾಷ್ಟ್ರ ಶ್ರೀಲಂಕಾಗೆ ಸಹಾಯ ಹಸ್ತ ಚಾಚಿದ ಪಾಕಿಸ್ತಾನ ಇದೀಗ ಮುಜುಗರಕ್ಕೀಡಾಗಿದೆ. 

ಹೌದು ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಭಾರತ ಸೇರಿದಂತೆ ಹಲವು ದೇಶಗಳು ನೆರವಿನ ಹಸ್ತ ಚಾಚಿದೆ. ಅವಧಿ ಮೀರಿದ ಪರಿಹಾರ ಪ್ಯಾಕೇಜ್‌ ರವಾನಿಸುವ ಮೂಲಕ ಪಾಕಿಸ್ತಾನವು ಜಗತ್ತಿನ ಎದುರು ಭಾರಿ ಮುಖಭಂಗಕ್ಕೊಳಗಾಗಿದೆ.

ಪಾಕಿಸ್ತಾನವೂ ಆಹಾರ ಸಾಮಾಗ್ರಿಗಳನ್ನೊಳಗೊಂಡ ಪರಿಹಾರ ಪ್ಯಾಕೇಜ್‌ ಅನ್ನು ಕಳುಹಿಸಿತ್ತು.

ಈ ಬಗ್ಗೆ ಫೋಟೊದೊಂದಿಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಶ್ರೀಲಂಕಾದಲ್ಲಿರುವ ಪಾಕಿಸ್ತಾನ ರಾಜತಾಂತ್ರಿಕ ಕಚೇರಿ, ‘ಶ್ರೀಲಂಕಾದಲ್ಲಿರುವ ಸಹೋದರ–ಸಹೋದರಿಯರಿಗೆ ಪಾಕಿಸ್ತಾನವು ಸಹಾಯಹಸ್ತ ಚಾಚಿದೆ’ ಎಂದು ಬರೆದುಕೊಂಡಿತ್ತು. ಆದರೆ, ಫೋಟೊದಲ್ಲಿರುವ ಆಹಾರ ಪೊಟ್ಟಣದಲ್ಲಿ ಬಳಕೆಯ ಅವಧಿ(ಎಕ್ಸ್‌ಪೈರಿ ಡೇಟ್‌) ‘10/2024’ ಎಂದು ನಮೂದಾಗಿರುವುದು ಎಲ್ಲರ ಗಮನ ಸೆಳೆದಿದೆ.

ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ಟೀಕೆಗೆ ಗುರಿಯಾಗಿತ್ತು. ಎಚ್ಚೆತ್ತ ರಾಜತಾಂತ್ರಿಕ ಕಚೇರಿ, ತಕ್ಷಣ ಪೋಸ್ಟ್‌ ಅನ್ನು ಅಳಿಸಿ ಹಾಕಿದೆ.

ಪರಿಹಾರ ಪ್ಯಾಕೇಜ್‌ ಅನ್ನು ಶ್ರೀಲಂಕಾಕ್ಕೆ ರವಾನಿಸಲು ಪಾಕಿಸ್ತಾನ ವಿಮಾನಕ್ಕೆ ತನ್ನ ವಾಯುಪ್ರದೇಶದ ಮೂಲಕ ಹಾದುಹೋಗಲು ಭಾರತ ಅನುವು ಮಾಡಿಕೊಟ್ಟಿತ್ತು.

ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ‘ಆಪರೇಷನ್‌ ಸಾಗರ ಬಂಧು’ ಅಡಿಯಲ್ಲಿ ಭಾರತವು 53 ಟನ್‌ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿದೆ. ಅದಲ್ಲದೆ ಐವರು ವೈದ್ಯರು ಸೇರಿದಂತೆ ಎನ್‌ಡಿಆರ್‌ಎಫ್‌ನ 80 ಮಂದಿಯ ತುಕಡಿಯನ್ನು ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಶ್ರೀಲಂಕಾಕ್ಕೆ ನೆರವು ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments