Select Your Language

Notifications

webdunia
webdunia
webdunia
webdunia

ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ! 10 ಮಂದಿ ಸಾವು

ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ!  10 ಮಂದಿ ಸಾವು
ನವದೆಹಲಿ , ಸೋಮವಾರ, 2 ಜನವರಿ 2023 (14:37 IST)
ಕಾಬೂಲ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
 
ಕಾಬೂಲ್ನ ಮಿಲಿಟರಿ ವಿಮಾನ ನಿಲ್ದಾಣದ ಮುಖ್ಯ ಗೇಟ್ಗೆ ಸಮೀಪದಲ್ಲಿ ಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫೀ ಟಕ್ಕೂರ್ ತಿಳಿಸಿದ್ದಾರೆ. ದಾಳಿ ಜವಾಬ್ದಾರಿಯನ್ನು ಈವರೆಗೂ ಯಾವ ಉಗ್ರ ಸಂಘಟನೆಯೂ ಹೊತ್ತಿಲ್ಲ.

ಈಚೆಗಷ್ಟೇ ಉತ್ತರ ತಖಾರ್ ಪ್ರಾಂತ್ಯದ ರಾಜಧಾನಿ ತಾಲೂಕನ್ ನಗರದಲ್ಲಿ ಸ್ಫೋಟವೊಂದು ಸಂಭವಿಸಿತ್ತು. ಈ ವೇಳೆ ನಾಲ್ವರು ಗಾಯಗೊಂಡಿದ್ದರು. ಇದಾದ ಮೂರು ದಿನಗಳಲ್ಲೇ ಮತ್ತೊಂದು ಸ್ಫೋಟ ಸಂಭವಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಆತಂಕ : ಹೊಸ ವರ್ಷದಲ್ಲಿ ದೇವಸ್ಥಾನಕ್ಕೆ ಭಕ್ತಸಾಗರ