Select Your Language

Notifications

webdunia
webdunia
webdunia
webdunia

ಪಾಕಿಸ್ತಾನದ ಹಲವೆಡೆ ಸ್ಫೋಟ! 5 ಸಾವು, 10 ಮಂದಿಗೆ ಗಾಯ

ಪಾಕಿಸ್ತಾನದ ಹಲವೆಡೆ ಸ್ಫೋಟ!  5 ಸಾವು, 10 ಮಂದಿಗೆ ಗಾಯ
ಇಸ್ಲಾಮಾಬಾದ್ , ಸೋಮವಾರ, 26 ಡಿಸೆಂಬರ್ 2022 (11:27 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಹಲವೆಡೆ ಸ್ಫೋಟ ನಡೆಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ. ಸ್ಫೋಟದಲ್ಲಿ 10 ಮಂದಿ ಗಾಯಗೊಂಡಿದ್ದಾರೆ.

ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ರಸ್ತೆಯ ಮೇಲೆ ಎಸೆಯಲಾಗಿದೆ. ಅದರಲ್ಲಿ ಒಂದು ಸ್ಫೋಟಗೊಂಡಿದೆ. ಮತ್ತೊಂದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದು ಕ್ವೆಟ್ಟಾ ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಬಲೂಚಿಸ್ತಾನ ಮುಖ್ಯಮಂತ್ರಿ ಅಬ್ದುಲ್ ಖುಡೂಸ್ ಬಿಜೆಂಜೊ ಅವರು ನಗರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಂತೆ ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ನೇಪಾಳದ ಪ್ರಧಾನಿ ಪಟ್ಟಕ್ಕೇರಿದ ಕಮಲ್ ದಹಾಲ್