ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಮಾಡಿ ಹಣ ನೀಡುತ್ತಿದ್ದನಂತೆ ಪಾಪಿ ತಂದೆ

ಸೋಮವಾರ, 20 ಮೇ 2019 (11:19 IST)
ಆಸ್ಟ್ರೇಲಿಯಾ : ಪೋರ್ನ್ ಚಿತ್ರಗಳನ್ನು ತೋರಿಸಿ  ಹೆತ್ತ ಮಗಳ  ಮೇಲೆಯೇ ತಂದೆ ಅತ್ಯಾಚಾರ ನಡೆಸಿ  ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತಾಯಿ ವಿದೇಶಕ್ಕೆ ತೆರಳಿದ ಹಿನ್ನಲೆಯಲ್ಲಿ 7 ವರ್ಷ ವಯಸ್ಸಿನ ಬಾಲಕಿ ತಂದೆ ಜೊತೆ ವಾಸವಾಗಿದ್ದಳು. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಪೋರ್ನ್ ಚಿತ್ರಗಳನ್ನು ತೋರಿಸಿ ಮಗಳ ಮೇಲೆಯೇ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ  ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ.


ಆದರೆ ಬಾಲಕಿಗೆ 15 ವರ್ಷ ವಯಸ್ಸಿಗೆ ತಂದೆಯ ದುಷ್ಕೃತ್ಯ ತಿಳಿದು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಕಾಮುಕ ತಂದೆಗೆ 18 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕೃಷ್ಣಾ ನದಿಗೆ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ; ಇಂದು ಅಥಣಿ ಬಂದ್‍