Webdunia - Bharat's app for daily news and videos

Install App

ಟ್ರಂಪ್ ಮನೆಯ ಮೇಲೆ ಎಫ್‍ಬಿಐ ದಾಳಿ

Webdunia
ಮಂಗಳವಾರ, 9 ಆಗಸ್ಟ್ 2022 (10:39 IST)
ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾರ್ ಎ ಲಾಗೊ ಎಸ್ಟೇಟ್ ಮೇಲೆ ಎಫ್ಬಿಐ ದಾಳಿ ಮಾಡಿದೆ.
 
2020ರಲ್ಲಿ ಚುನಾವಣೆಯ ಸೋಲಿನ ಬಳಿಕ ಟ್ರಂಪ್ ಶ್ವೇತಭವನವನ್ನು ತೊರೆದು, ತಮ್ಮ ಫ್ಲೊರಿಡಾ ನಿವಾಸಕ್ಕೆ ವರ್ಗೀಕೃತ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆಯೇ ಎಂಬುದನ್ನು ಅಮೆರಿಕದ ನ್ಯಾಯಾಂಗ ಇಲಾಖೆ ತನಿಖೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿ, ಇದು ನಮ್ಮ ರಾಷ್ಟ್ರಕ್ಕೆ ಕರಾಳ ಸಮಯವಾಗಿದೆ. ಏಕೆಂದರೆ ಫ್ಲೊರಿಡಾದ ಪಾಮ್ ಬೀಚ್ನಲ್ಲಿರುವ ನನ್ನ ಮನೆ ಮೇಲೆ ದಾಳಿ ನಡೆದಿದೆ. ಎಫ್ಬಿಐ ಅಧಿಕಾರಿಗಳು ಮನೆಯನ್ನು ಆಕ್ರಮಿಸಿಕೊಂಡಿದ್ದಾರೆ.

ಅಮೆರಿಕದ ಅಧ್ಯಕ್ಷ ಹುದ್ದೆಯಲ್ಲಿದ್ದವರಿಗೆ ಈ ಹಿಂದೆ ಇಂತಹ ಪರಿಸ್ಥಿತಿ ಎಂದೂ ಬಂದಿರಲಿಲ್ಲ. ಸರ್ಕಾರಿ ತನಿಖಾ ಏಜೆನ್ಸಿಗಳೊಂದಿಗೆ ಸಹಕರಿಸಿದ ನಂತರವೂ, ನನ್ನ ಮನೆಯ ಮೇಲೆ ಈ ಅಘೋಷಿತ ದಾಳಿ ಅಗತ್ಯವಿರಲಿಲ್ಲ. ಹಾಗೂ ಅದು ಸೂಕ್ತ ಅಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಫ್ಬಿಐ ಅಧಿಕಾರಿಗಳು ತಮ್ಮ ಸುರಕ್ಷಿತ ನೆಲೆಯ ಬಾಗಿಲನ್ನು ಒಡೆದು ತೆರೆದಿದ್ದಾರೆ. ಈ ರೀತಿಯ ದಾಳಿ ತೃತೀಯ ಜಗತ್ತಿನ ದೇಶಗಳಲ್ಲಿ ಮಾತ್ರ ನಡೆಯುತ್ತದೆ ಎಂದ ಅವರು, ತಮ್ಮ ಮನೆಗೆ ಎಫ್ಬಿಐ ಮುತ್ತಿಗೆ ಹಾಕಿದೆ ಎಂದು ಕಿಡಿಕಾರಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments