Select Your Language

Notifications

webdunia
webdunia
webdunia
webdunia

ಪಾಶ್ಚಾತ್ಯ ರಾಷ್ಟ್ರಗಳಿಗೆ ಭಯವೇ? : ಝೆಲೆನ್ಸ್ಕಿ

ಪಾಶ್ಚಾತ್ಯ ರಾಷ್ಟ್ರಗಳಿಗೆ ಭಯವೇ? : ಝೆಲೆನ್ಸ್ಕಿ
ಕೀವ್ , ಭಾನುವಾರ, 27 ಮಾರ್ಚ್ 2022 (10:34 IST)
ಕೀವ್ : ಶಸ್ತ್ರಾಸ್ತ್ರಗಳನ್ನು ನೀಡುವಂತೆ ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮನವಿ ಮಾಡಿ,

ರಷ್ಯಾ ಬಗ್ಗೆ ಭಯವಿದೆಯೇ ಎಂದೂ ಪ್ರಶ್ನಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಯುದ್ಧ ವಿಮಾನಗಳನ್ನು ಹೊಡೆದುರುಳಿಸುವ ಕ್ಷಿಪಣಿಗಳು ಮತ್ತು ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ರವಾನಿಸುವುದಾಗಿ ಹಲವು ರಾಷ್ಟ್ರಗಳು ಭರವಸೆ ನೀಡಿವೆ.

ಆದರೆ ಉಕ್ರೇನ್ಗೆ ಯುದ್ಧ ಟ್ಯಾಂಕರ್ಗಳು, ವಿಮಾನಗಳು ಮತ್ತು ಜಲಾಂತರ್ಗಾಮಿಗಳ ಅವಶ್ಯಕತೆ ಇದೆ. ನಮ್ಮ ಪಾಲುದಾರ ರಾಷ್ಟ್ರಗಳು ಯಾವೆಲ್ಲ ಶಸ್ತ್ರಾಸ್ತ್ರಗಳನ್ನು ಹೊಂದಿವೆಯೋ, ಯಾವೆಲ್ಲ ಶಸ್ತ್ರಾಸ್ತ್ರಗಳು ಧೂಳು ಹಿಡಿಯುತ್ತಿವೆಯೋ ಅವು ಉಕ್ರೆನ್ಗಾಗಿ ಮಾತ್ರವಲ್ಲ, ಇಡೀ ಯುರೋಪಿನ ಸ್ವಾತಂತ್ರ್ಯಕ್ಕಾಗಿ ಅಗತ್ಯವಾಗಿದೆ ಎಂದಿದ್ದಾರೆ.

ಶಸ್ತ್ರಾಸ್ತ್ರ ನೀಡುವಂತೆ ಮನವಿ: ನ್ಯಾಟೊ ಹೊಂದಿರುವ ಶೇ 1 ರಷ್ಟು ಯುದ್ಧ ವಿಮಾನಗಳು ಮತ್ತು ಶೇ 1 ರಷ್ಟು ಟ್ಯಾಂಕ್ಗಳು ಉಕ್ರೇನ್ಗೆ ಬೇಕಾಗಿವೆ. ನಾವು ಅದಕ್ಕಿಂತ ಹೆಚ್ಚೇನೂ ಕೇಳುತ್ತಿಲ್ಲ.

ಪೂರ್ವ ಯುರೋಪ್ನಲ್ಲಿರುವ ರಷ್ಯಾ ನಿರ್ಮಿತ ಯುದ್ಧ ವಿಮಾನಗಳನ್ನು ಇನ್ನೂ ಉಕ್ರೇನ್ಗೆ ರವಾನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಫೆಬ್ರುವರಿ 24ರಿಂದ ರಷ್ಯಾ ದಾಳಿಯ ಪರಿಣಾಮ ಉಕ್ರೇನ್ನ ಸುಮಾರು 30 ಲಕ್ಷ ಜನರು ತಮ್ಮ ರಾಷ್ಟ್ರ ತೊರೆದು ವಲಸೆ ಹೋಗಿದ್ದು, ಪಶ್ಚಿಮ ರಾಷ್ಟ್ರಗಳ ಬೆಂಬಲ ಕೋರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಗತ್ಯ ಔಷಧಗಳ ಬೆಲೆ ಏರಿಕೆ!