ಕೊಲಂಬೊ : ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ.
ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ದಿನೇ ದಿನೇ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು.
ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಿದ್ದರು.
ಇದೀಗ ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ. ಈಗಾಗಲೇ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.