ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಪ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಭಾನುವಾರ, 3 ನವೆಂಬರ್ 2019 (09:15 IST)
ಲಾಹೋರ್ : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಪ್ ಅವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.
ಇತ್ತೀಚಿಗಷ್ಟೇ  ನವಾಜ್ ಷರೀಫ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಅಡ್ನಾನ್ ಖಾನ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಗಂಭೀರವಾಗಿ ಅಸ್ವಸ್ಥರಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮೂತ್ರ ಪಿಂಡದ ಕಾರ್ಯ ಕ್ಷೀಣಿಸುವ ಮೂಲಕ ಥ್ರಂಬೋಸೈಟೋಪೆನಿಯಾ ಮತ್ತು ಎನ್ ಎಸ್ ಟಿಇಎಂಐ ಮತ್ತಷ್ಟು ಜಟಿಲವಾಗಿದೆ. ಮಧುಮೇಹ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ತಿಳಿಸಿದ್ದಾರೆ.


ಇದೀಗ ನವಾಜ್ ಷರೀಫ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಅವರ ಪ್ಲೇಟ್ ಲೆಟ್ ಸಂಖ್ಯೆ ಕುಸಿಯುತ್ತಿದೆ ಎಂದು ವೈದ್ಯ ಡಾ.ಅಡ್ನಾನ್ ಖಾನ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವಕೀಲರು - ಪೊಲೀಸರ ನಡುವೆ ಮಾರಾಮಾರಿ : ಕಾರುಗಳಿಗೆ ಬೆಂಕಿ, ಉದ್ವಿಗ್ನ