Select Your Language

Notifications

webdunia
webdunia
webdunia
webdunia

ಕೋರ್ಟ್‌ನತ್ತ ತೆರಳಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್

ಕೋರ್ಟ್‌ನತ್ತ ತೆರಳಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್
ಇಸ್ಲಾಮಾಬಾದ್ , ಭಾನುವಾರ, 19 ಮಾರ್ಚ್ 2023 (11:52 IST)
ಇಸ್ಲಾಮಾಬಾದ್ : ತೋಶಾಖಾನ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕೋರ್ಟ್ನತ್ತ ತೆರಳುತ್ತಿದ್ದಂತೆ ಇತ್ತ ಅವರ ಮನೆಗೆ ಪೊಲೀಸರು ನುಗ್ಗಿದ್ದಾರೆ.

ಮನೆಯಲ್ಲಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೇಗಂ ಇದ್ದರು. ಮನೆ ಹೊರಗೆ ಇರಿಸಿದ್ದ ಬ್ಯಾರಿಕೇಡ್ಗಳನ್ನು ತೆಗೆದು ಪೊಲೀಸರು ಖಾನ್ ಮನೆಗೆ ನುಗ್ಗಿದ್ದಾರೆ. ಈ ವೇಳೆ ತಡೆಯಲು ಮುಂದಾದ ಇಮ್ರಾನ್ ಖಾನ್ ಬೆಂಬಲಿಗರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಈ ಸಂಬಂಧದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. 

ಪೊಲೀಸರ ವರ್ತನೆಗೆ ಕಿಡಿಕಾರಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ. ನನ್ನ ಪತ್ನಿ ಒಬ್ಬಳೇ ಇರುವ ಸಂದರ್ಭದಲ್ಲಿ ಪೊಲೀಸರು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಯಾವ ಕಾನೂನಿನ ಅಡಿಯಲ್ಲಿ ಅವರು ಈ ರೀತಿ ಮಾಡುತ್ತಿದ್ದಾರೆ? ಎಂದು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರವೇ ಡೊನಾಲ್ಡ್ ಟ್ರಂಪ್ ಬಂಧನ?