Webdunia - Bharat's app for daily news and videos

Install App

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

Sampriya
ಬುಧವಾರ, 21 ಮೇ 2025 (19:41 IST)
Photo Courtesy X
ಲಾಹೋರ್‌: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಖುಜ್ಜಾರ್ ಜಿಲ್ಲೆಯಲ್ಲಿ ಶಾಲಾ ಬಸ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ದಾಳಿಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ಸ್ಪೋಟದ ಘಟನೆಯ ಬಗ್ಗೆ ಪಾಕ್‌ ಭಾರತದತ್ತ ಬೊಟ್ಟು ಮಾಡಿದೆ. ಆದರೆ, ಪಾಕ್​ ಮಾಡಿರುವ ಆಧಾರರಹಿತ ಆರೋಪಗಳನ್ನು ಭಾರತ ತಿರಸ್ಕರಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಬಾಂಬ್ ದಾಳಿಯನ್ನು ಖಂಡಿಸಿ, ಇದನ್ನು ಭಾರತದ ಬೆಂಬಲಿತ ಭಯೋತ್ಪಾದಕರು ಮಾಡಿರಬಹುದು ಎಂದು ಆರೋಪಿಸಿದ್ದರು.

ಆತ್ಮಾಹುತಿ ಬಾಂಬ್ ದಾಳಿಯಲ್ಲಿ ನಡೆದ ಜೀವಹಾನಿಗೆ ಭಾರತ ಸಂತಾಪ ವ್ಯಕ್ತಪಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಖುಜ್ದಾರ್ ಘಟನೆಯಲ್ಲಿ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ಆಧಾರರಹಿತ ಆರೋಪಗಳನ್ನು ಭಾರತ ತಿರಸ್ಕರಿಸುತ್ತದೆ ಎಂದು ಜೈಸ್ವಾಲ್ ಹೇಳಿದ್ದಾರೆ.

ಜಾಗತಿಕ ಭಯೋತ್ಪಾದನೆಯ ಕೇಂದ್ರಬಿಂದು ಎಂಬ ತನ್ನ ಖ್ಯಾತಿಯಿಂದ ಗಮನವನ್ನು ಬೇರೆಡೆ ಸೆಳೆಯಲು ಮತ್ತು ತನ್ನದೇ ಆದ ಘೋರ ವೈಫಲ್ಯಗಳನ್ನು ಮರೆಮಾಡಲು, ಪಾಕಿಸ್ತಾನವು ತನ್ನ ಎಲ್ಲಾ ಆಂತರಿಕ ಸಮಸ್ಯೆಗಳಿಗೆ ಭಾರತವನ್ನು ದೂಷಿಸುವುದು ಎರಡನೇ ಸ್ವಭಾವವಾಗಿದೆ. ಜಗತ್ತನ್ನು ಮೋಸಗೊಳಿಸುವ ಈ ಪ್ರಯತ್ನ ವಿಫಲವಾಗುವುದು ಖಚಿತ ಎಂದು ಜೈಸ್ವಾಲ್  ತಿರುಗೇಟು ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments