Select Your Language

Notifications

webdunia
webdunia
webdunia
webdunia

ಕುವೈತ್`ನಲ್ಲಿ ಅನಿವಾಸಿ ಭಾರತೀಯರಿಗಾಗಿ ಉಚಿತ ಆರೋಗ್ಯ ಶಿಬಿರ

ಕುವೈತ್
ಕುವೈತ್ , ಸೋಮವಾರ, 28 ಆಗಸ್ಟ್ 2017 (22:22 IST)
ಅನಿವಾಸಿ ಭಾರತೀಯರ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಾಗಿರುವ ಇಂಡಿಯನ್ ಸೋಶಿಯಲ್ ಫೋರಮ್ ಕುವೈಟ್ ಸಂಘಟನೆ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನ ಾಗಸ್ಟ್ 25ರಂದು ಫರ್ವಾನಿಯಾದ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್`ನಲ್ಲಿ  ಆಯೋಜಿಸಿತ್ತು.
 

ಅನಿವಾಸಿ ಭಾರತೀಯರಲ್ಲಿ ವಿಶೇಷವಾಗಿ ಅಸಂಘಟಿತ, ದುರ್ಬಲ, ಕಾರ್ಮಿಕ ವರ್ಗಗಳ ಮಧ್ಯೆ ಆರೋಗ್ಯದ ಕುರಿತಾದ ಜಾಗೃತಿ ಮೂಡಿಸಲು ಹಾಗೂ ಭಾರತೀಯ ಮೂಲದ ತಜ್ಞ ವೈದ್ಯರಿಂದ ಸೂಕ್ತ ಸಲಹೆ ನೀಡುವ ಗುರಿಯಾದರಿಸಿ ಹಮ್ಮಿಕೊಂಡಿದ್ದ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ನೂರಾರು ಸಂಖ್ಯೆಯ ಅನಿವಾಸಿಗಳು ಪಡೆದುಕೊಂಡರು. ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಹಾಗೂ ನುರಿತ ವೈದ್ಯರುಗಳನ್ನೊಳಗೊಂಡ ಮಧ್ಯಪ್ರಾಚ್ಯದ ಖಾಸಗಿ ವಲಯದ ಪ್ರಮುಖ ಆರೋಗ್ಯ ಕೇಂದ್ರಗಳಲ್ಲೊಂದಾದ ಬದ್ರ್ ಅಲ್ ಸಮಾ ಸಹಭಾಗಿತ್ವದಲ್ಲಿ ನಡೆದ ಶಿಬಿರದ ಪ್ರಯೋಜನ ಪಡೆಯುವುದಕ್ಕಾಗಿ ಮುಂಜಾನೆಯಿಂದಲೇ ಅಪಾರ ಸಂಖ್ಯೆಯಲ್ಲಿ ಅನಿವಾಸಿಗಳು ಸರತಿ ಸಾಲಿನಲ್ಲಿ ನಿಂತಿದ್ದರು.
 

ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್, ಎಸ್ ಜಿ ಪಿ ಟಿ  (ಲಿವರ್ ಸ್ಕ್ರೀನಿಂಗ್), ಕ್ರಿಯೇಟಿನೈನ್ (ಮೂತ್ರಪಿಂಡಗಳ ಪರೀಕ್ಷೆ) ಮುಂತಾದ ಪರೀಕ್ಷೆಗಳು ಶಿಬಿರಾರ್ಥಿಗಳಿಗೆಉಚಿತವಾಗಿಲಭ್ಯವಿದ್ದವು. ಅಲ್ಲದೆ ಜನರಲ್ ಮೆಡಿಸಿನ್, ಮಕ್ಕಳ ವಿಭಾಗ, ಸ್ತ್ರೀ ರೋಗ ವಿಭಾಗ, ದಂತ ಚಿಕಿತ್ಸಾ ವಿಭಾಗ, ಜನರಲ್ ಸರ್ಜರಿ ಒಳಗೊಂಡಂತೆ ವಿವಿಧ ಕ್ಷೇತ್ರಗಳ ತಜ್ಞ ವೈದ್ಯರಿಂದ ಸಂದರ್ಶನ ಪಡೆದು ಅನಿವಾಸಿಗಳು ಆರೋಗ್ಯಕ್ಕೆ ಸಂಬಂಧಪಟ್ಟ ಸೂಕ್ತ ಸಲಹೆಗಳನ್ನು ಪಡೆದುಕೊಂಡರು.
 

ಕರ್ನಾಟಕ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ನಾಯಕರಾದ ಜನಾಬ್ ಹಸನ್ ಯೂಸುಫ್ ಆರೋಗ್ಯ ತಪಾಸಣಾ ಶಿಬಿರವನ್ನು ಗಿ ಉದ್ಘಾಟಿಸಿದರು, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬದ್ರ್ ಅಲ್ ಸಮಾ ಮೆಡಿಕಲ್ ಸೆಂಟರ್ ವ್ಯವಸ್ಥಾಪಕ ಅಬ್ದುಲ್ ರಜಾಕ್’ರವರು ಆರೋಗ್ಯದ ಪ್ರಾಮುಖ್ಯತೆ ಕುರಿತು ತಿಳಿ ಹೇಳಿದರು. ಅನಿವಾಸಿಗಳು ಕೆಲಸದ ಒತ್ತಡದಿಂದಾಗಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದಲ್ಲದೆ, ಹೃದಯಸಂಬಂಧಿ ಗಂಭೀರ ಖಾಯಿಲೆಗಳ ಲಕ್ಷಣಗಳನ್ನು ಆರಂಭಿಕ ಹಂತದಲ್ಲಿ ಗುರುತಿಸಲು ವಿಫಲವಾಗುತ್ತಿದ್ದಾರೆ ಎಂದು ವಿಷಾದಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

49 ಹೊಸ ತಾಲೂಕುಗಳ ರಚನೆಗೆ ಗ್ರೀನ್ ಸಿಗ್ನಲ್: ಸಚಿವ ಜಯಚಂದ್ರ