Webdunia - Bharat's app for daily news and videos

Install App

ಪಾಕಿಸ್ತಾನದಲ್ಲಿ ಮತ್ತೆ ಇಂಧನ ಬೆಲೆ ಏರಿಕೆ

Webdunia
ಶುಕ್ರವಾರ, 17 ಮಾರ್ಚ್ 2023 (09:11 IST)
ಇಸ್ಲಾಮಾಬಾದ್ : ಮುಸ್ಲಿಮರ ರಂಜಾನ್  ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯುಳಿದಿವೆ. ಈ ಸಂದರ್ಭ ಪಾಕಿಸ್ತಾನ ಸರ್ಕಾರವು ಇಂಧನ ಬೆಲೆ ಏರಿಕೆ ಮಾಡಿದ್ದು ಜನರ ಮೇಲೆ ಒತ್ತಡ ಹೆಚ್ಚಾಗಿದೆ.

ಅಮೆರಿಕ ಡಾಲರ್ ಎದುರು ಪಾಕಿಸ್ತಾನಿ ರೂಪಾಯಿ ದುರ್ಬಲಗೊಂಡ ಹಿನ್ನೆಲೆಯಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಹೊಸ ಬೆಲೆಗಳು ಗುರುವಾರ ಮಧ್ಯರಾತ್ರಿ 12 ಗಂಟೆಗೆ ಜಾರಿಗೆ ಬಂದಿದ್ದು ಮಾರ್ಚ್ 31ರ ವರೆಗೆ ಜಾರಿಯಲ್ಲಿರುತ್ತದೆ.

ಪಾಕಿಸ್ತಾನ ಸರ್ಕಾರವು ಪೆಟ್ರೋಲ್ ಬೆಲೆಯನ್ನು ಲೀಟರಿಗೆ 5ರೂ. ಹೆಚ್ಚಳ ಮಾಡಿದ್ದು ಪ್ರಸ್ತುತ ಒಂದು ಲೀಟರ್ ಪೆಟ್ರೋಲ್ ಬೆಲೆಯು 272 ಪಾಕಿಸ್ತಾನ ರೂ.ಗಳಾಗಿದೆ. ಅಲ್ಲದೇ ಡೀಸೆಲ್ ಬೆಲೆಯನ್ನು ಲೀಟರಿಗೆ 13 ರೂ. ಹೆಚ್ಚಳ ಮಾಡಲಾಗಿದ್ದು ಈಗ 280 ರೂ. ಆಗಿದೆ. 

ಫೆಬ್ರವರಿ 28ರಂದು ಪಾಕಿಸ್ತಾನ ಸರ್ಕಾರವು ಪೆಟ್ರೋಲ್ ಬೆಲೆಯನ್ನು ಪ್ರತೀ ಲೀಟರಿಗೆ 5 ಪಾಕಿಸ್ತಾನಿ ರುಪಾಯಿ ಕಡಿಮೆ ಮಾಡಿತ್ತು. ಹೀಗಾಗಿ ಪೆಟ್ರೋಲ್ ಬೆಲೆಯು ಲೀಟರ್ಗೆ 267 ರೂಗೆ ಇಳಿಕೆಯಾಗಿತ್ತು. ಇದೀಗ ಮತ್ತೆ ಪಾಕಿಸ್ತಾನ ಸರ್ಕಾರವು ಬೆಲೆ ಏರಿಕೆ ಮಾಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments